“ಎಸ್ಸೆಸ್ಸೆಲ್ಸಿ ಇಂಗ್ಲಿಷ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ”

  • In State
  • March 27, 2019
  • 258 Views
“ಎಸ್ಸೆಸ್ಸೆಲ್ಸಿ ಇಂಗ್ಲಿಷ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ”

ಬೆಂಗಳೂರು, ಮಾ, 26, ನ್ಯೂಸ್ ಎಕ್ಸ್ ಪ್ರೆಸ್:  ಎಸ್ಸೆಸ್ಸೆಲ್ಸಿ ಇಂಗ್ಲಿಷ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ವಾಟ್ಸ್‌ ಆಪ್‌ನಲ್ಲಿ ಹರಿದಾಡುತ್ತಿದೆ ಎನ್ನುವುದು ಸತ್ಯಕ್ಕೆ ದೂರವಾದ ವಿಚಾರ. ವಿದ್ಯಾರ್ಥಿಗಳು, ಪಾಲಕ, ಪೋಷಕರು ಇಂತಹ ಸುಳ್ಳು ಸಂದೇಶಕ್ಕೆ ಗಮನ ನೀಡಬಾರದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ವಾಟ್ಸ್‌ ಆಯಪ್‌ನಲ್ಲಿ ಹರಿದಾಡುತ್ತಿರುವ ಇಂಗ್ಲಿಷ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಫೋಟೋ ಪ್ರತಿ ನಕಲಿಯಾ. ಇದಕ್ಕೂ ಬುಧವಾರ ನಡೆಯಲಿರುವ ಇಂಗ್ಲಿಷ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆಗೂ ಯಾವುದೇ ಸಂಬಂಧ ಇಲ್ಲ ಎಂದು ಇಲಾಖೆಯ ಆಯುಕ್ತ ಡಾ.ಪಿ.ಸಿ.ಜಾಫ‌ರ್‌ ಸ್ಪಷ್ಟಪಡಿಸಿದ್ದಾರೆ. ಈ ರೀತಿಯ ಕುಕೃತ್ಯ ಎಸಗಿ ವಿದ್ಯಾರ್ಥಿಗಳು ಮತ್ತು ಪಾಲಕ, ಪೋಷಕರಲ್ಲಿ ಭಯ ಹುಟ್ಟಿಸುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್‌ ಇಲಾಖೆಗೆ ದೂರು ಸಲ್ಲಿಸಲಿದ್ದೇವೆ.

ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಬಾರದು. ಪಾಲಕರುಕೂಡ ಮಕ್ಕಳನ್ನು ಮೊಬೈಲ್‌ನಿಂದ ದೂರ ಉಳಿಸಬೇಕು. ಖಾಸಗಿ ಅಭ್ಯರ್ಥಿಗಳ ಬಗ್ಗೆ ವಿಶೇಷ ಎಚ್ಚರ ವಹಿಸಲಿದ್ದೇವೆ ಎಂದು ಮಂಡಳಿ ತಿಳಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos