ಬೆಂಗಳೂರು, ಏ. 25, ನ್ಯೂಸ್ ಎಕ್ಸ್ ಪ್ರೆಸ್: ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಮೇ 2ರೊಳಗೆ ಪ್ರಕಟಗೊಳ್ಳುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಆನ್‌ಲೈನ್‌ನಲ್ಲಿ ಅಂಕಗಳನ್ನು ನಮೂದಿಸುವ ಕಾರ್ಯ ಸಹ ತ್ವರಿತವಾಗಿ ನಡೆಯುತ್ತಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯ ಎಲ್ಲಾ ಪ್ರಕ್ರಿಯೆಗಳನ್ನು ಡಿಜಿಟಲೀಕರಣಗೊಳಿಸಿರುವುದರಿಂದ, ಈ ಬಾರಿ ಶೀಘ್ರ ಫಲಿತಾಂಶ ಪ್ರಕಟಿಸಬಹುದಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. 10ನೇ ತರಗತಿ ಪರೀಕ್ಷೆ ಫಲಿತಾಂಶವು ಪ್ರಕಟವಾಗುತ್ತಿದ್ದಂತೆ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.inನಲ್ಲಿ ಕಾಣಿಸಲಿದೆ. ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಫಲಿತಾಂಶಗಳ ವೆಬ್‌ಸೈಟ್ ಮೂಲಕ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.