ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ

ಬೆಂಗಳೂರು, ಏ. 30, ನ್ಯೂಸ್ ಎಕ್ಸ್ ಪ್ರೆಸ್: 2019ನೇ ಸಾಲಿನ ಎಸ್ಎಸ್ಎಲ್ ಸಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪರೀಕ್ಷೆ ಫಲಿತಾಂಶ ಘೋಷಣೆ ಮಾಡಿದೆ. ಶಾಲೆಗಳಲ್ಲಿ ಮೇ 1ರಂದು ಫಲಿತಾಂಶ ಲಭ್ಯವಾಗಲಿದೆ. ಇಂದು ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾ ಶಂಕರ್, ಮಂಡಳಿಯ ನಿರ್ದೇಶಕಿ ವಿ.ಸುಮಂಗಲಾ ಅವರು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶವನ್ನು ಪ್ರಕಟಿಸಿದರು. ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಇಂದು ಫಲಿತಾಂಶ ಪಡೆಯಬಹುದಾಗಿದೆ.

2019ನೇ ಸಾಲಿನಲ್ಲಿ 2,847 ಪರೀಕ್ಷಾ ಕೇಂದ್ರಗಳಲ್ಲಿ 8,41,666 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಮಾ. 22 ರಿಂದ ಏ. 4ರ ತನಕ ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆದಿತ್ತು. ಮಧ್ಯಾಹ್ನ 1 ಗಂಟೆಯ ಬಳಿಕ ಆನ್ಲೈನ್ ನಲ್ಲಿ ಪರೀಕ್ಷೆ ಫಲಿತಾಂಶ ಸಿಗಲಿದೆ. ‘ಮೌಲ್ಯ ಮಾಪನ ಆದ ನಂತರ ಕೇಂದ್ರದಿಂದಲೇ ಆನ್ ಲೈನ್ ನಲ್ಲಿ ಅಪ್ ಲೋಡ್ ಮಾಡಿದ್ದೇವೆ. ಆದ್ದರಿಂದ, ಇಷ್ಟು ಬೇಗ ಫಲಿತಾಂಶವನ್ನು ನೀಡಲು ಸಾಧ್ಯವಾಯಿತು’ ಎಂದು ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ ಕಾರ್ಯದರ್ಶಿ ಉಮಾ ಶಂಕರ್ ಹೇಳಿದರು. 2019ನೇ ಸಾಲಿನಲ್ಲಿ ಶೇ 73.70ರಷ್ಟು ಫಲಿತಾಂಶ ಬಂದಿದೆ. ಬಾಲಕಿಯರು ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಫಲಿತಾಂಶವನ್ನು ಪಡೆದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos