ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ

ಬೆಂಗಳೂರು: ಇಂದು ಮಧ್ಯಾಹ್ನ 3.30ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶವು ಸರ್ಕಾರದ ಅಧಿಕೃತ ತಾಣವಾದ  http://kseeb.kar.nic.in, http://kseeb.kar.nic.in ಪ್ರಕಟವಾಗಲಿದೆ.

ಈ ಬಾರಿ ವಿದ್ಯಾರ್ಥಿಗಳ ಮೊಬೈಲಿಗೆ ಫಲಿತಾಂಶ ಬರಲಿದೆ. ಕೋವಿಡ್ 19 ಹಿನ್ನೆಲೆ ವಿದ್ಯಾರ್ಥಿಗಳು ಶಾಲೆಗೆ ಬಂದು ಫಲಿತಾಂಶ ವೀಕ್ಷಿಸಲು ಕಷ್ಟವಗಬಹುದೆಂಬ ಉದ್ದೇಶದಿಂದ ಫಲಿತಾಂಶ ಮೊಬೈಲ್‌ಗೆ ಬರುವ ಹಾಗೆ ಮಾಡಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು

ಈ ವಿಷಯಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಸುರೇಶ್ ಕುಮಾರ್, ಆತ್ಮೀಯ ಪೊಷಕರೇ, ಇಂದು ದಿನಾಂಕ 10.08.2020 ರ ಮಧ್ಯಾಹ್ನ 3.30 ರ ಹೊತ್ತಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಗುತ್ತದೆ. ತಮ್ಮ ಮೊಬೈಲ್‌ಗೆ ಫಲಿತಾಂಶ ಬರುವುದರಿಂದ ಕೊರೋನಾ ವಾತಾವರಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವುದೆ ದೊಡ್ಡ ಸಾಧನೆ. ಎಂಬುದು ತಮಗೆ ತಿಳಿದಿರಲಿ. ತಮ್ಮ ಮಕ್ಕಳ ಫಲಿತಾಂಶ ಎಷ್ಟೇ ಆಗಿರಲಿ ಅವರಿಗೆ ಹೇಳುವಾಗ ನಿಧಾನವಾಗಿ ಪ್ರೀತಿಯಿಂದ ತಿಳಿಸಿ. ಗಳಿಸಿದ ಅಂಕಗಳಿಗೆ ತೃಪ್ತಿ ಪಡುವಂತೆ ಮನವೊಲಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿ .

ಅವರನ್ನು ಬೇರೆಯವರೊಂದಿಗೆ ಹೋಲಿಕೆ ಮಾಡಿ ನೋವಾಗುವಂತೆ ಮಾಡಬೇಡಿ. ಅವರು ಯಾವ ಕೋರ್ಸನ್ನು ಆಯ್ಕೆ ಮಾಡಿದ್ದರೂ ಆ ಕೋರ್ಸಿಗೆ ಸೇರಿಸಿ ಮುಂದೆ ಚೆನ್ನಾಗಿ ಓದಲು ಹೇಳಿ ಹಾಗೂ ಒಂದು ವೇಳೆ ಅವರ ನಿರೀಕ್ಷೆಗಿಂತ ಯಾವುದಾದರೂ ವಿಷಯದಲ್ಲಿ ಕಡಿಮೆ ಅಂಕ ಬಂದಲ್ಲಿ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅವಕಾಶವಿರುತ್ತದೆ.
ಮಗು ಮನೆಯ ಬೆಳಕು ಆ ಬೆಳಕು ಸದಾ ಪ್ರಜ್ವಲಿಸಲಿ ಎಂಬುದೇ ನಮ್ಮೆಲ್ಲರ ಆಶಯ ಪ್ರಕಟವಾಗಲಿದೆ.

ಫ್ರೆಶ್ ನ್ಯೂಸ್

Latest Posts

Featured Videos