ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು!

  • In Crime
  • July 6, 2021
  • 173 Views
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು!

ಯಾದಗಿರಿ : ಜಿಲ್ಲೆಯ ಸುರಪುರ ತಾಲ್ಲೂಕಿನ ಚಿಕ್ಕನಹಳ್ಳಿ ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ.

ಚಿಕ್ಕನಹಳ್ಳಿ ಗ್ರಾಮದಿಂದ ಬಾಚಿಮಟ್ಟಿ ಗ್ರಾಮದಲ್ಲಿರೋ ಪ್ರೌಢಶಾಲೆಗೆ 10ನೇ ತರಗತಿಯ ಹಾಲ್ ಟಿಕೆಟ್ ತರಲು ಹೊರಟಿದ್ದ, ವಿದ್ಯಾರ್ಥಿ ಮಂಜುನಾಥ (16)  ಟ್ರಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಕುಟುಂಬಸ್ಥರು ಹಾಗೂ ಜನರು ಆಗಮಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಈ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos