ಸ್ಥಳೀಯರಿಗೆ ನದಿ ತೀರಕ್ಕೆ ಹೋಗದಂತೆ ಎಚ್ಚರಿಕೆ

 ಸ್ಥಳೀಯರಿಗೆ ನದಿ ತೀರಕ್ಕೆ ಹೋಗದಂತೆ ಎಚ್ಚರಿಕೆ

ಯಾದಗಿರಿ, ಸೆ. 03 : ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಜಲಾಶಯದಲ್ಲಿ ನೀರಿನ ಹರಿವು ಹೆಚ್ಚಿರುವ  ಹಿನ್ನಲೆ ನದಿ ತೀರಕ್ಕೆ ತೆರಳದಂತೆ ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದೆ. ಸುರಪುರ ತಹಶೀಲ್ದಾರ್ ಸುರೇಶ್ ಅಂಕಲಗಿ ಆದೇಶ ನೀಡಿದ್ದಾರೆ. ಬಸವಸಾಗರ ಜಲಾಶಯದಲ್ಲಿ  ನೀರಿನ ಒಳಹರಿವು ಹೆಚ್ಚಾದ ಕಾರಣ ಕೃಷ್ಣಾ ನದಿಗೆ ನೀರು ಹರಿಯ ಬಿಡಲಾಗಿದೆ. ಬಸವಸಾಗರದಿಂದ 34800 ಕ್ಯೂಸೆಕ್ ನೀರು ಹರಿಸಲಾಗಿದೆ. ಮಹಾರಾಷ್ಟ್ರದಲ್ಲಿ ಹಾಗೂ ಯಾದಗಿರಿ ಜಿಲ್ಲೆಯಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಯಬಿಡಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos