ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿದ ಸ್ಟಾರ್ ಚಂದ್ರು

ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿದ ಸ್ಟಾರ್ ಚಂದ್ರು

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆ ರಂಗೇರಿದ್ದು ರಾಜ್ಯದಲ್ಲೇ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ಕಳೆದ ಲೋಕಸಭೆಯಂತೆ ಈ ಬಾರಿಯೂ ಮಂಡ್ಯ ಲೋಕಸಭೆ ಜಿದ್ದಾಜಿದ್ದಿಗೆ ಕಾರಣವಾಗಿದೆ, ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರು ಕಣಕ್ಕಿಳಿದಿದ್ದಾರೆ, ಕಾಂಗ್ರೆಸ್ ನಿಂದ ವೆಂಕಟರಮಣೇಗೌಡ ಅವರು ಕಣಕ್ಕಿಳಿದಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿನ್ನೆ ವೆಂಕಟರಮಣೇಗೌಡ ಅವರು ನಾಮಪತ್ರ ಸಲ್ಲಿಕೆ ಮಾಡಿದರು. ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಭೇಟಿ. ಸದಾಶಿವ ನಗರದ ಎಸ್.ಎಂ.ಕೃಷ್ಣ ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ಗಣಿಗ ರವಿ, ದಿನೇಶ್ ಗೂಳಿಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಹೊನ್ನಲಗೆರೆ ರಾಮಕೃಷ್ಣ, ಮಾಜಿ ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ ಜತೆಗಿದ್ದರು.

ಎಸ್.ಎಂ.ಕೃಷ್ಣ ಅವರಿಗೆ ಹೂಮಾಲೆ ಹಾಕಿ, ಶಾಲು ಹೊದಿಸಿ ಸನ್ಮಾನಿಸಿದರು. ಉಭಯ ಕುಶಲೋಪರಿ ವಿಚಾರಿಸಿದ ನಾಯಕರು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos