CSK ತಂಡದಿಂದ ಸ್ಟಾರ್ ಆಟಗಾರ ಐಪಿಎಲ್​ನಿಂದ ಔಟ್.!

CSK ತಂಡದಿಂದ ಸ್ಟಾರ್ ಆಟಗಾರ ಐಪಿಎಲ್​ನಿಂದ ಔಟ್.!

ಬೆಂಗಳೂರು: ಕ್ರಿಕೆಟ್‌ ಪ್ರೇಮಿಗಳಿಗೆ ಬಿಸಿಸಿಐಸಿಹಿ ಸುದ್ದಿ ನೀಡಿದೆ. ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಂಣ ಮಂಡಳಿ ಪ್ರಕಟಿಸಿದೆ. 2024ರ ಐಪಿಎಲ್​ ಟೂರ್ನಿ ಮಾರ್ಚ್​ 22ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲೇ ಹಾಲಿ ಚಾಂಪಿಯನ್ಸ್‌ ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯಲಿದೆ. ಚೆನ್ನೈನ ಚಿದಂಬರಂ ಕ್ರಿಕೆಟ್​ ಕ್ರೀಡಾಂಗಣದಲ್ಲಿ ಕಾದಾಟ ನಡೆಸಲಿವೆ.

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತ ಎದುರಾಗಿದೆ. ಸಿಎಸ್​ಕೆ ತಂಡದ ಸ್ಟಾರ್ ಆಟಗಾರ ಈ ಬಾರಿಯ ಐಪಿಎಲ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

ಹೌದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೆ ಗಾಯಗೊಂಡಿದ್ದು, ಅವರು ಮೇ ತಿಂಗಳ ತನಕ ಮೈದಾನಕ್ಕಿಳಿಯಲು ಸಾಧ್ಯವಾಗುವುದಿಲ್ಲ ಎಂದು ವರದಿಯಾಗಿದೆ. ಹೀಗಾಗಿ ಈ ಬಾರಿಯ ಐಪಿಎಲ್​ಗೆ ಕಾನ್ವೆ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ವೇಳೆ ನ್ಯೂಝಿಲೆಂಡ್ ಆಟಗಾರ ಡೆವೊನ್ ಕಾನ್ವೆ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿತ್ತು. ಇದೀಗ ವೈದ್ಯಕೀಯ ವರದಿಯಲ್ಲಿ ಶಸ್ತ್ರಚಿಕಿತ್ಸೆ ಅನಿವಾರ್ಯ ಎಂದು ತಿಳಿದು ಬಂದಿದ್ದು, ಹೀಗಾಗಿ ಈ ವಾರ ಅವರು ಸರ್ಜರಿಗೆ ಒಳಗಾಗಲಿದ್ದಾರೆ. ಅಲ್ಲದೆ ಕನಿಷ್ಠ ಎಂಟು ವಾರಗಳವರೆಗೆ ಅವರು ವಿಶ್ರಾಂತಿ ಪಡೆಯಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos