ನವದೆಹಲಿ,ನ. 6 : ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿರುವ ಅನರ್ಹ ಶಾಸಕರಿಗೆ ಮತ್ತೆ ಟೆನ್ಷನ್ ಶುರುವಾಗಿದೆ. ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಅನರ್ಹ ಶಾಸಕರ ಅಧಿಕಾರದಿಂದ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದ್ರೀಗ ಅದೇ ಅನರ್ಹ ಶಾಸಕರ ಭವಿಷ್ಯ ತೂಗುಯ್ಯಾಲೆಯಲ್ಲಿದೆ. ನಿನ್ನೆಯೇ ಸುಪ್ರೀಂಕೋರ್ಟ್ನಿಂದ ತೀರ್ಪು ಹೊರಬೀಳುತ್ತೆ ಎನ್ನಲಾಗಿತ್ತು.
ಆದರೆ ಬಿಎಸ್ವೈ ಆಡಿಯೋವನ್ನ ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸುವಂತೆ ವಕೀಲ ಕಪಿಲ್ ಸಿಬಲ್ ಮನವಿ ಮಾಡಿದ್ದರು. ವಿಚಾರಣೆ ನಡೆಸಿದ ನ್ಯಾಯಪೀಠ, ತೀರ್ಪು ಕಾಯ್ದಿರಿಸಿದೆ. ಸ್ಪೀಕರ್ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿರೋ ಸುಪ್ರೀಂಕೋರ್ಟ್, ಬಿಜೆಪಿ ಕೋರ್ ಕಮಿಟಿಯಲ್ಲಿ ಮಾತನಾಡಿದೆ. ಒಟ್ನಲ್ಲಿ ಅನರ್ಹತೆಯಿಂದ ಪಾರಾಗಿ ಉಪ ಚುನಾವಣೆಯಲ್ಲಿ ಸ್ಪರ್ಧಿಸೋ ಕನಸಲ್ಲಿದ್ದ ಅನರ್ಹ ಶಾಸಕರಿಗೆ ಬಿಗ್ ಶಾಕ್ ಎದುರಾಗಿದೆ. ಅನರ್ಹ ಶಾಸಕರಿಗೆ ಟೆನ್ಷನ್ ಶುರುವಾಗಿದೆ. ಶುಕ್ರವಾರ ಅಂತಿಮ ತೀರ್ಪು ಪ್ರಕಟವಾಗುವ ಸಾಧ್ಯತೆ ಇದ್ದು, ಬಿಎಸ್ವೈ ಮಾತೇ ಅನರ್ಹರಿಗೆ ಕಂಟವಾಗುತ್ತಾ..? ಕಾದು ನೋಡಬೇಕಿದೆ.