ರಾಜ್ಯ ಬಜೆಟ್‌ ಅಧಿವೇಶನಕ್ಕೆ ಕೇಸರಿ ಶಾಲು ಧರಿಸಿಕೊಂಡು ಬಂದ ವಿಪಕ್ಷ ನಾಯಕರು!

ರಾಜ್ಯ ಬಜೆಟ್‌ ಅಧಿವೇಶನಕ್ಕೆ ಕೇಸರಿ ಶಾಲು ಧರಿಸಿಕೊಂಡು ಬಂದ ವಿಪಕ್ಷ ನಾಯಕರು!

ಬೆಂಗಳೂರು: ರಾಜ್ಯ ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಇಂದು ಆರಂಭವಾಗಿದೆ. ಬಿಜೆಪಿ ಸದಸ್ಯರು ಕೇಸರಿ ಶಾಲು ಧರಿಸಿ ಆಗಮಿಸುವ ಮೂಲಕ ವಿಶೇಷತೆ ಮೆರೆದರು. ಇದರೊಂದಿಗೆ ರಾಜ್ಯದ ಇನ್ನಷ್ಟು ಪ್ರಮುಖ ರಾಜಕೀಯ, ಸಾಂಸ್ಕೃತಿಕ, ಸಾಮಾಜಿಕ ವಿದ್ಯಮಾನಗಳ ಮಾಹಿತಿ ಪಡೆಯಬಹುದು.

ಕರ್ನಾಟಕ ಬಜೆಟ್​ ಅಧಿವೇಶನ 2024 ಆರಂಭವಾಗಿದೆ. ಹತ್ತು ದಿನಗಳ ಕಾಲ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16 ರಂದು ಬಜೆಟ್​ ಮಂಡನೆ ಮಾಡಲಿದ್ದಾರೆ.

ಅಧಿವೇಶನ ಇಂದು ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು. ಬಜೆಟ್​ ಅಧಿವೇಶನದ ಮೊದಲ ದಿನ ಬಿಜೆಪಿ ನಾಯಕರು ಕೇಸರಿ ಶಾಲೆ ಧರಿಸಿಕೊಂಡು ಬಂದಿದ್ದು ವಿಶೇಷವಾಗಿದೆ. ಕೆರಗೋಡಿನಲ್ಲಿ ಹನುಮ ಧ್ವಜವನ್ನು ಮತ್ತೆ ಹಾರಿಸಲು ಬಿಜೆಪಿ ನಾಯಕರು ಪಣತೊಟ್ಟಿದ್ದಾರೆ. ಇದರ ಪ್ರತೀಕವೆಂಬಂತೆ ಬಿಜೆಪಿ ಶಾಸಕರು ಅಧಿವೇಶನಕ್ಕೆ ಕೇಸರಿ ಶಾಲು ಧರಿಸಿಕೊಂಡು ಬಂದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos