ರಾಜ್ಯ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ: ಸಿದ್ದು!

ರಾಜ್ಯ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ: ಸಿದ್ದು!

ಜಮಖಂಡಿ, ಆ. 27: ರಾಜ್ಯ ಸರ್ಕಾರದಲ್ಲಿ ಮತ್ತೆ ಕಲಹಗಳು ಶುರುವಾಗಿವೆ. ಹೌದು, ರಾಜ್ಯ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ. ಖಾತೆ ಹಂಚಿಕೆ ಬಗ್ಗೆ ಈಗಾಗಲೇ ಅಸಮಾಧಾನ ಶುರುವಾಗಿದ್ದು, ಅದು ಸ್ಫೋಟವಾಗಿ ಸರ್ಕಾರ ಪತನವಾಗಲಿದೆ. ಹೈಕಮಾಂಡ್ಗೆ ಇಷ್ಟವಿಲ್ಲದಿದ್ದರೂ ಸಿಎಂ ಆಗುತ್ತೇನೆಂದು ಗೋಗರೆದು ಅಧಿಕಾರ ಹಿಡಿದ ಯಡಿಯೂರಪ್ಪನವರು ಮಾಡಿಕೊಂಡ ಸ್ವಯಂಕೃತ ಅಪರಾಧಕ್ಕೆ ಬಿಜೆಪಿ ಸರ್ಕಾರ ಬಲಿಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಸಚಿವ ಸ್ಥಾನ ನೀಡುವಲ್ಲಿ ಎಡವಿದ್ದ ಬಿಜೆಪಿ ನಾಯಕರು ಖಾತೆ ಹಂಚಿಕೆಯಲ್ಲೂ ಅಸಮಾಧಾನಕ್ಕೆ ಕಾರಣವಾಗಿದ್ದಾರೆ. ಖಾತೆ ಹಂಚಿಕೆಯಲ್ಲಿ ಹಿರಿತನಕ್ಕೆ ಬೆಲೆ ಕೊಡಲಿಲ್ಲ. ಹಿಂದೆ ಉಪಮುಖ್ಯಮಂತ್ರಿಯಾಗಿದ್ದವರಿಗೆ ಕೈ ಕೊಟ್ಟಿದ್ದಾರೆ. ಮುಖ್ಯಮಂತ್ರಿಯಾಗಿದ್ದ ಜಗದೀಶ್ ಶೆಟ್ಟರ್ ಅವರನ್ನೂ ಡಿಸಿಎಂ ಮಾಡಲಿಲ್ಲ. ಖಂಡಿತ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟವಾಗಲಿದೆ. ಸ್ವಯಂಕೃತ ಅಪರಾಧದಿಂದಲೇ ಸರ್ಕಾರ ಬೀಳಲಿದೆ ಎಂದು ಹೇಳಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos