ಸ್ವಚ್ಛತೆ ಕಾಪಾಡಲು ಪಣ ತೊಡಿ

ಸ್ವಚ್ಛತೆ ಕಾಪಾಡಲು ಪಣ ತೊಡಿ

ಕೋಲಾರ: ಪ್ರತಿಯೊಬ್ಬರೂ ತಮ್ಮ ಮನೆಗಳಿಂದಲೇ ಸ್ವಚ್ಛತೆ ಕಾಪಾಡುವ ಪಣ ತೊಡಬೇಕು. ಇದರಿಂದ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್ ತಿಳಿಸಿದರು.
ತಾಲೂಕಿನ ವಕ್ಕಲೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಮಲ್ಲೇಶ್ವರ ಕ್ಷೇತ್ರ ಕಲ್ಯಾಣಿ ಸ್ವಚ್ಛತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲೂ ಸ್ವಚ್ಛತೆ ನಿರ್ವಹಿಸುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ. ಆಯಾ ಗ್ರಾಮಗಳ ಜನರು ಜತೆಯಾಗುತ್ತಿದ್ದಾರೆ ಎಂದರು.
ಜಿಲ್ಲೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಆಂದೋಲನದ ರೀತಿ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಸ್ವಚ್ಛತೆಗೂ ಸ್ಥಳೀಯ ಸಂಸ್ಥೆಗಳ ಮೇಲೆ ಅವಲಂಬನೆಯಾಗಬಾರದು. ಸ್ವ-ಇಚ್ಚೆಯಿಂದ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳಬೇಕು. ಜತೆಗೆ ಆರೋಗ್ಯ ಸಮಾಜ ನಿರ್ಮಾಣ ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಂಜೀವಪ್ಪ ಮಾತನಾಡಿ, ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಉದ್ದೇಶದಿಂದ ಕಲ್ಯಾಣಿಗಳ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಎಲ್ಲ ಇಲಾಖೆಯ ಅಧಿಕಾರಿಗಳು ಸಹಕಾರ ನೀಡುತ್ತಿದ್ದು, ಸಾರ್ವಜನಿಕರು ಕೈ ಜೋಡಿಸಬೇಕು ಎಂದರು.
ಕAದಾಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಜಿ.ಪಂ ಯೋಜನಾ ನಿರ್ದೇಶಕ ಮುನಿಕೃಷ್ಣಪ್ಪ, ಪ್ರವಾಸೋದ್ಯ ಇಲಾಖೆ ಸಹಾಯಕ ನಿರ್ದೇಶಕಿ ಸೌಮ್ಯ, ಮುಜರಾಯಿ ಇಲಾಖೆ ತಹಶೀಲ್ದಾರ್ ನಾಗವೇಣಿ ಪಾಲ್ಗೊಂಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos