ರಾಜ್ಯದ 63 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಘೋಷಣೆ

ರಾಜ್ಯದ 63 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಘೋಷಣೆ

ಬೆಂಗಳೂರು, ಮೇ. 2, ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯದ ಸ್ಥಳೀಯ ಸಂಸ್ಥಗಳಿಗೆ ಚುನಾವಣೆ ಘೋಷಣೆಯಾಗಿದೆ. ಮೇ 29ರಂದು ರಾಜ್ಯದ 63 ನಗರ ಸಭೆ, ಪುರಸಭೆ ಮತ್ತು ನಗರ ಪಾಲಿಕೆಗಳಿಗೆ ಚುನಾವಣೆ ನಡೆಯಲಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ರಾಜ್ಯ ಚುನಾವಣಾಧಿಕಾರಿ ಶ್ರೀನಿವಾಸಾಚಾರಿ, ರಾಜ್ಯದಲ್ಲಿನ ಸ್ಥಳೀಯ ಸಂಸ್ಥೆಗಳಿಗೆ ಮೇ.29ರಂದು ಮತದಾನ, ಮೇ.31ರಂದು ಮತ ಏಣಿಕೆ ನಡೆಯಲಿದೆ ಎಂದು ತಿಳಿಸಿದರು. ರಾಜ್ಯದ ಒಟ್ಟು 63 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದ್ದು, ಇದರಲ್ಲಿ ನಗರಸಭೆ, ಪುರಸಭೆ ಮತ್ತು ನಗರ ಪಾಲಿಕೆಗಳು ಸೇರಿವೆ.

ಈ ಬಗ್ಗೆ ಮೇ.5ರಂದು ಚುನಾವಣಾ ಅಧಿಸೂಚನೆ ಜಾರಿಯಾಗಲಿದ್ದು, ಮೇ.16ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮೇ.20ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos