ಹೊಸ ಇತಿಹಾಸ ನಿರ್ಮಿಸಿದ ಸ್ಟೊಯಿನಿಸ್

ಹೊಸ ಇತಿಹಾಸ ನಿರ್ಮಿಸಿದ ಸ್ಟೊಯಿನಿಸ್

ಬೆಂಗಳೂರು:ನಿನ್ನೆ ಚೆನ್ನೈನ ಐಕಾನಿಕ್ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 39ನೇ ರೋಚಕ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಮಾರ್ಕಸ್ ಸ್ಟೊಯಿನಿಸ್ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್​ ಪರ ರುತುರಾಜ್ ಗಾಯಕ್ವಾಡ್ ಸೆಂಚುರಿ ನೆರವಿನೊಂದಿಗೆ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 210 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಾರ್ಕಸ್ ಸ್ಟೊಯಿನಿಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಸ್ಟೊಯಿನಿಸ್ (124) ಅಜೇಯ ಶತಕ ಸಿಡಿಸಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಜಯ ತಂದುಕೊಡುವಲ್ಲಿ ಯಶಸ್ವಿಯಾದರು.

ವಿಶೇಷ ಎಂದರೆ 124 ರನ್​ಗಳೊಂದಿಗೆ ಮಾರ್ಕಸ್ ಸ್ಟೊಯಿನಿಸ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಂದರೆ ಐಪಿಎಲ್​ನಲ್ಲಿ ಚೇಸಿಂಗ್​ ವೇಳೆ ಅತ್ಯಧಿಕ ರನ್ ಬಾರಿಸಿದ ದಾಖಲೆ ಇದೀಗ ಸ್ಟೊಯಿನಿಸ್ ಪಾಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos