ಸಿಲಿಕಾನ್ ಸಿಟಿಯಲ್ಲಿ ಬೀದಿ ನಾಯಿಗಳ ಹಾವಳಿ!!

ಸಿಲಿಕಾನ್ ಸಿಟಿಯಲ್ಲಿ ಬೀದಿ ನಾಯಿಗಳ ಹಾವಳಿ!!

ಬೆಂಗಳೂರು:ರಾಜ್ಯದ  ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಗರದಲ್ಲಿ ಪ್ರತಿ ದಿನ ಸರಾಸರಿ 85ಕ್ಕೂ ಅಧಿಕ ಮಂದಿ ನಾಯಿ ಕಚ್ಚಿಸಿಕೊಳ್ಳುತ್ತಿದ್ದಾರೆ. ಕಳೆದ 2023ರ ಏಪ್ರಿಲ್ನಿಂದ ಸೆಪ್ಟೆಂಬರ್ ಅವಧಿಯ ಒಟ್ಟು ಆರು ತಿಂಗಳಲ್ಲಿ ನಗರದಲ್ಲಿ ಒಟ್ಟು 15,285 ಮಂದಿಗೆ ನಾಯಿಗಳು ಕಚ್ಚಿದ ವರದಿಯಾಗಿದೆ ಎಂಬುದು ಬಿಬಿಎಂಪಿಯ ಅಂಕಿ ಅಂಶದಿಂದ ಬೆಳಕಿಗೆ ಬಂದಿದೆ. ಈ ಪ್ರಕಾರ ನಗರದಲ್ಲಿ ಪ್ರತಿ ದಿನ ಸುಮಾರು 85 ಮಂದಿ ನಾಯಿ ಕಚ್ಚಿಸಿಕೊಳ್ಳುತ್ತಿದ್ದಾರೆಂದು ತಿಳಿದು ಬಂದಿದೆ.

ಈ ಕುರಿತು ವಿವರಣೆ ನೀಡಿರುವ ಬಿಬಿಎಂಪಿಯ ಪಶುಪಾಲನೆ ವಿಭಾಗದ ಅಧಿಕಾರಿಗಳು, ಬೀದಿ ನಾಯಿಗಳ ಹಾವಳಿ ತಡೆಗಟ್ಟುವುದಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದಲ್ಲಿ ಶೇ.10ರಷ್ಟು ಬೀದಿ ನಾಯಿಗಳ ಸಂಖ್ಯೆ ಕಡಿಮೆಯಾಗಿದೆ. ಬೀದಿ ನಾಯಿಗಳಿಗೆ ನಿಯಮಿತವಾಗಿ ಲಿಸಿಕೆ, ಸಂತಾನಹರಣ ಚಿಕಿತ್ಸೆ ನಡೆಸಲಾಗುತ್ತಿದೆ. ಸಾರ್ವಜನಿಕರು ಮತ್ತು ಮಕ್ಕಳಲ್ಲಿ ಬೀದಿ ನಾಯಿಗಳ ಕಚ್ಚುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos