ಬೆಂಗಳೂರು: ರಾಜ್ಯಸಭಾ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವ ಆರೋಪಕ್ಕೆ ಸಂಬಂಧಿಸಿ ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರಗೊಂಡಿರುವ ಬೆನ್ನಲ್ಲೇ ಆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವ ರಾಜ್ಯ ಸರ್ಕಾರ ತನಿಖೆಗೆ ಆದೇಶ ನೀಡಿದೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕೂಗಿದ್ದು ಸಾಬೀತಾ ಆದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಅಂತವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ, ಕಠಿಣ ಕ್ರಮ ಕೈಗೊಳ್ಳಲಾಗುವುದು ರಾಷ್ಟ್ರ ದ್ರೋಹಿ ಘೋಷಣೆ ಕೂಗಿದವರನ್ನು ಯಾವ ಕಾರಣಕ್ಕೂ ರಕ್ಷಿಸಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ