ಮಹದೇವಪುರ, ನ. 19: ಕ್ಷೇತ್ರದಲ್ಲಿ ರಸ್ತೆಗಳನ್ನು ಅಕ್ರಮವಾಗಿ ಅಗೆದು ನಾಶ ಪಡಿಸುವ ಖಾಸಗಿ ಸಂಸ್ಥೆಗಳು ಹಾಗೂ ಸ್ಥಳಿಯರಿಗೆ ಸೂಕ್ತ ದಂಡ ವಿಧಿಸಲಾಗುತ್ತದೆ ಎಂದು ಸ್ಥಳೀಯ ಶಾಸಕ ಅರವಿಂದ್ ಲಿಂಬಾವಳಿ ಎಚ್ಚರಿಕೆ ನೀಡಿದರು.
ವರ್ತೂರು ವಾರ್ಡ್ ನಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆಯನ್ನು, ಸ್ಥಳಿಯ ಪಾಲಿಕೆ ಸದಸ್ಯೆ ಪುಷ್ಪ ಮಂಜುನಾಥ್, ಮುಖಂಡ ರೊಂದಿಗೆ ಸೇರಿ ಚಾಲನೆ ನೀಡಿ ಮಾತನಾಡಿದ ಅವರು,
ಮಧುರಾನಗರ್, ಗುಂಜೂರುಪಾಳ್ಯ ಗ್ರಾಮಗಳಲ್ಲಿ ಕಾಂಕ್ರೀಟ್ ಚರಂಡಿ, ಹಲಸಹಳ್ಳಿ, ಗುಂಜೂರು ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ವರ್ತೂರು ಇಂದಿರಾ ಕ್ಯಾಂಟೀನ್ ಪಕ್ಕದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಮಾಡಲಾಗಿದೆ ಎಂದರು.
ಅಕ್ರಮವಾಗಿ ರಸ್ತೆಗಳನ್ನು ಅಗೆಯುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಮತ್ತು ದಂಡವನ್ನು ಹಾಕಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಜಾರೆಡ್ಡಿ, ವೆಂಕಟಸ್ವಾಮಿ ರೆಡ್ಡಿ, ವರ್ತೂರು ಶ್ರೀಧರ್, ಸುನೀಲ್ ಕುಮಾರ್, ವಾರ್ಡ್ ಅಧ್ಯಕ್ಷ ಮಂಜುನಾಥ್, ವರ್ತೂರು ಮಂಜುನಾಥ್, ವಿಜಯ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.