ಬೆಂಗಳೂರು: ಕೊಲೆ ಆರೋಪವನ್ನು ಎದುರಿಸುತ್ತಿರುವ ನಟ ದರ್ಶನ್ ಅವರು ಈಗ ಬಳ್ಳಾರಿ ಕಾರಾಗ್ರಹದಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ಇನ್ನು ಕೊಲೆಯಾದ ರೇಣುಕಾ ಸ್ವಾಮಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲು ಕೋರ್ಟ್ ನಲ್ಲಿ ಹೋರಾಟ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೇಣುಕಾ ಸ್ವಾಮಿ ಅವರ ಕುಟುಂಬದ ಜೊತೆ ನಾವಿದ್ದೇವೆ. ಅವರು ನಮ್ಮಿಂದ ನ್ಯಾಯವನ್ನು ನಿರೀಕ್ಷಿಸಬಹುದು ಹಾಗಾಗಿ ನಾವು ಕೋರ್ಟ್ ನಲ್ಲಿ ರೇಣುಕಾ ಸ್ವಾಮಿಯವರ ಕುಟುಂಬಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ನಾನು ಎಂದಿಗೂ ಸುಳ್ಳು ಹೇಳಿಲ್ಲ, ಯಾವುದೇ ತಪ್ಪು ಮಾಡಿಲ್ಲ: ಸಿಎಂ
ಈ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ಆಧರಿಸಿ ಯಾರನ್ನು ಎ1, ಎ2 ಆರೋಪಿಗಳನ್ನಾಗಿಸಬೇಕು ಎಂಬುದನ್ನು ತನಿಖಾಧಿಕಾರಿಗಳು ನಿರ್ಧರಿಸಲಿದ್ದಾರೆ ಎಂದು ಹೇಳಿದರು.