ವಿದ್ಯಾರ್ಥಿ ನೇಣಿಗೆ ಶರಣು

ಚಂಡೀಗಢ, ಡಿ.1 : ಚಡ್ಡಿ ಹಾಕಿಕೊಂಡು ಹೋಗಿದ್ದಕ್ಕೆ ಶಿಕ್ಷಕ ಕ್ಲಾಸಿನಲ್ಲಿ ಹೊಡೆದು ಅವಮಾನಿಸಿದ್ದಕ್ಕೆ ಬೇಸರಗೊಂಡು 11ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪಂಜಾಬಿನ ಲುಧಿಯಾನ ಜಿಲ್ಲೆಯ ಗುರ್ಮೆಲ್ ನಗರದ ಮನೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾರ್ಥಿ ಚಡ್ಡಿ ಹಾಕಿಕೊಂಡು ಬಂದಿದ್ದ ಎಂದು ಶಿಕ್ಷಕರು ವಿದ್ಯಾರ್ಥಿಯನ್ನು ಹೊಡೆದಿದ್ದಾರೆ. ಇದರಿಂದ ಬೇಸರಗೊಂಡ 11ನೇ ತರಗತಿ ವಿದ್ಯಾರ್ಥಿ ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನಿಗೆ ರಾತ್ರಿ ಊಟ ಮಾಡುವಂತೆ ತಾಯಿ ಹೇಳಿದ್ದಾರೆ. ಊಟ ಬೇಡವೆಂದು ವಿದ್ಯಾರ್ಥಿ ತನ್ನ ರೂಂಗೆ ತೆರಳಿದ್ದಾನೆ. ನಂತರ ತಾಯಿ ರೂಂಗೆ ಹೋಗಿ ನೋಡಿದ್ದು, ಬಾಗಿಲು ತೆರೆಯುತ್ತಿದ್ದಂತೆ ಆಘಾತಕ್ಕೊಳಗಾಗಿದ್ದಾರೆ. ಮಗನ ದೇಹ ಸೀಲಿಂಗ್ ಫ್ಯಾನಿಗೆ ನೇತಾಡುತ್ತಿದ್ದುದನ್ನು ಕಂಡು ಕುಸಿದಿದ್ದಾರೆ. ನಂತರ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ವೈದ್ಯರು ಸಾವನ್ನಪ್ಪಿರುವ ಕುರಿತು ದೃಢಪಡಿಸಿದ್ದಾರೆ

ಫ್ರೆಶ್ ನ್ಯೂಸ್

Latest Posts

Featured Videos