ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸಲಾಗುವುದು

ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸಲಾಗುವುದು

ಕೋಲಾರ: ಕೋವಿಡ್-೧೯ ಹಿನ್ನೆಲೆಯಲ್ಲಿ ಹಲವಾರು ತಿಂಗಳಿಂದ ಮುಚ್ಚಲ್ಪಟ್ಟಿದ್ದ ಕಾಲೇಜುಗಳು ಇಂದು ಆರಂಭಗೊಂಡಿದೆ. ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ತಿಳಿಸಿದರು.
ನಗರದ ಮಹಿಳಾ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಆರಂಭದ ಪೂರ್ವ ಸಿದ್ದತೆಯನ್ನು ಪರಿಶೀಲಿಸಿ ಅವರು ಮಾತನಾಡಿದರು. ಕಾಲೇಜಿನ ಕೊಠಡಿಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಪ್ರಾಂಶುಪಾಲರಿಗೆ ಸೂಚಿಸಿದರು. ಕಾಲೇಜಿನ ಶೌಚಾಲಯಗಳನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯನ್ನು ಮಾಡಲಾಯಿತು.
ವಿದ್ಯಾರ್ಥಿಗಳು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯನ್ನು ಮಾಡಿಸಿಕೊಂಡು ನಂತರ ಕಾಲೇಜಿಗೆ ಬರಬೇಕು ಎಂದು ಸೂಚಿಸಿದರು. ಕಾಲೇಜಿಗೆ ಜಿಲ್ಲೆಯ ವಿವಿಧ ಭಾಗಗಳಿಂದ ಕಾಲೇಜಿಗೆ ಬರುತ್ತಾರೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ಚಾರಿಣಿ, ಕಾಲೇಜಿನ ಪ್ರಾಂಶುಪಾಲರಾದ ಡಾ. ಗಂಗಾಧರ್ ರಾವ್, ಸೇರಿದಂತೆ ಉಪನ್ಯಾಸಕರು ಹಾಜರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos