ಸುದೀಪ್ ದಂಪತಿಗೆ ವಿವಾಹ ವಾರ್ಷಿಕೋತ್ಸವ

ಸುದೀಪ್ ದಂಪತಿಗೆ ವಿವಾಹ ವಾರ್ಷಿಕೋತ್ಸವ

ಬೆಂಗಳೂರು,ಅ. 18 : ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್ ಮಾಡುವ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅ. 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos