ಸಕ್ಕರೆ ದರ ಏರಿಕೆ!

ಸಕ್ಕರೆ ದರ ಏರಿಕೆ!

ಇತ್ತೀಚಿನ ದಿನಗಳಲ್ಲಿ ದುಬಾರಿ ದುನಿಯಾ ಆಗಿರುವುದರಿಂದ ಜನಸಾಮಾನ್ಯರು ಜೀವನ ನಡೆಸುವುದು ಒಂದು ದೊಡ್ಡ ಸಮಸ್ಯೆಯಾಗಿದೆ. ಅದರಲ್ಲಿಯೂ ಸಹ ಹಣ್ಣು, ತರಕಾರಿ, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಇದೇ ತರ ದುಬಾರಿ ದುನಿಯಾದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇದರೆಲ್ಲರ ಮಧ್ಯ ದಿನನಿತ್ಯ ಬಳಸುವಂತಹ ಸಕ್ಕರೆಯ ದರವು ಹೆಚ್ಚಾಗುತ್ತಿದೆ.
ಹೌದು, ದೇಶದಲ್ಲಿ ಸಕ್ಕರೆ ಉತ್ಪಾದನೆ ಇಳಿಕೆಯಾಗಿದ್ದು, ಸಕ್ಕರೆ ದರ ಏರಿಕೆಯಾಗುವ ಸಂಭವ ಇದೆ. ಮಳೆ ಕೊರತೆಯ ಕಾರಣ ಕರ್ನಾಟಕದಲ್ಲಿ ಸಕ್ಕರೆ ಉತ್ಪಾದನೆ ಕಡಿಮೆಯಾಗಲಿದೆ ಎಂದು ರಾಷ್ಟ್ರೀಯ ಸಕ್ಕರೆ ಕಾರ್ಖಾನೆಗಳ ಸಹಕಾರ ಒಕ್ಕೂಟವು ತಿಳಿಸಿದೆ.
ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಸರಾಸರಿಗಿಂತ ಶೇ.50ರಷ್ಟು ಕಡಿಮೆ ಪ್ರಮಾಣದಲ್ಲಿ ಮುಂಗಾರು ಮಳೆಯಾಗಿದೆ. ಇದು ಸಕ್ಕರೆ ಉತ್ಪಾದನೆ ಮೇಲೆ ನೇರ ಪರಿಣಾಮ ಬೀರಲಿದ್ದು, ಉತ್ಪಾದನೆ ಕಡಿಮೆಯಾಗಿದೆ. ಇದರಿಂದ ದರ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos