ಸ್ಪರ್ಧೆಯಿಂದ ಹಿಂದೆ ಸರಿಯಲ್ಲ: ಸುಮಲತಾ

ಸ್ಪರ್ಧೆಯಿಂದ  ಹಿಂದೆ ಸರಿಯಲ್ಲ: ಸುಮಲತಾ

ಮಂಡ್ಯ, ಮಾ.12, ನ್ಯೂಸ್ ಎಕ್ಸ್ ಪ್ರೆಸ್:  ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುವ ಮುನ್ನವೇ ಚುನಾವಣಾ ಅಖಾಡ ರಂಗೇರತೊಡಗಿದೆ. ಮತ್ತೊಂದೆಡೆ ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ತನ್ನ ಸ್ಪರ್ಧೆ ಖಚಿತ, ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಅವರು ಹಿಂದೆ ಸರಿಯಲಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಸುದ್ದಿಯ ಬಗ್ಗೆ ಪತ್ರಕರ್ತರು ಮಂಗಳವಾರ ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಿದ ಅವರು, ನನ್ನ ವಿರುದ್ಧ ವದಂತಿಯನ್ನು ಹಬ್ಬಿಸುತ್ತಿದ್ದಾರೆ. ಇದನ್ನು ಯಾರೂ ನಂಬಬೇಡಿ. ನಾನು ಕಣದಿಂದ ಹಿಂದೆ ಸರಿಯುವುದಿಲ್ಲ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos