ಬಿಜೆಪಿ ಸೇರ್ಪಡೆಯಾಗಲಿರುವ ಸುಮಲತಾ

ಬಿಜೆಪಿ ಸೇರ್ಪಡೆಯಾಗಲಿರುವ ಸುಮಲತಾ

ಮಂಡ್ಯ: ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಬೇಸರಗೊಂಡಿದ್ದ ಸಂಸದೆ ಸುಮಲತಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರು ಜೆಪಿ ನಗರದ ಮನೆಯಲ್ಲಿ ಭೇಟಿ ಮಾಡಿ, ಲೋಕಸಭೆ ಚುನಾವಣೆಯಲ್ಲಿ ಬೆಂಬಲ ಮತ್ತು ಸಹಕಾರ ಕೋರಿದ್ದರು.

ಬುಧವಾರ ಮಂಡ್ಯದಲ್ಲಿ ಸಭೆ ನಡೆಸಿ ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದರು. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ, ಹಾಗೆಯೇ ಮಂಡ್ಯ ಬಿಟ್ಟು ಬೇರೆ ಎಲ್ಲಿಯೂ ಚುನಾವಣೆಗೆ ನಿಲ್ಲುವುದಿಲ್ಲ ಎಂದು ನಿರ್ಧಾರ ಘೋಷಣೆ ಮಾಡಿದ್ದರು.

ಕಳೆದ ಲೋಕಸಭಾ ಚುನಾ ವಣೆಯಲ್ಲಿ ಮಂಡ್ಯದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಬಿಜೆಪಿಗೆ ಬಾಹ್ಯ ಬೆಂಬಲ ಘೋಷಿಸಿದ್ದ ಮಾಜಿ ಸಂಸದೆ ಸುಮಲತಾ ಇಂದು ಅಧಿಕೃತವಾಗಿ ಬಿಜೆಪಿ ಸೇರಲಿದ್ದು, ಮಂಡ್ಯದಲ್ಲಿ ಬಿಜೆಪಿ- ಜೆಡಿಎಸ್‌ಮೈತ್ರಿ ಅಭ್ಯರ್ಥಿಯಾಗಿರುವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಬೆಂಬಲಿಸಲಿದ್ದಾರೆ.

ಇಂದು ಬೆಳಗ್ಗೆ 11.30ಕ್ಕೆ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಕ್ಷಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸುಮಲತಾ ಅವರನ್ನು ಬರ ಮಾಡಿಕೊಳ್ಳಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಸದಾನಂದ ಗೌಡ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ, ವಿಪಕ್ಷ ನಾಯಕ ಆರ್‌. ಅಶೋಕ್‌, ಮಾಜಿ ಸಚಿವರಾದ ಸಿ.ಟಿ. ರವಿ, ಡಾ| ಅಶ್ವತ್ಥನಾರಾಯಣ ಸಮ್ಮುಖದಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos