ಮಂಡ್ಯ, ಮೇ. 23, ನ್ಯೂಸ್ ಎಕ್ಸ್ ಪ್ರೆಸ್: 2019ರ ಲೋಖಸಭಾ ಚುನಾವಣೆಯಲ್ಲಿ ರಾಜ್ಯವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದ ಕ್ಷೇತ್ರವೆಂದರೆ ಅದು ಮಂಡ್ಯ ಹೌದು, ಭಾರೀ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮುಂದುವರೆದಿದ್ದು 11ನೇ ಸುತ್ತಿನ ಅಂತ್ಯದ ವೇಳೆಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ಎದುರಾಳಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗಿಂತ 40 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ.
ಸುಮಲತಾ 11 ನೇ ಸುತ್ತಿನ ಮತ ಎಣಿಕೆ ಅಂತ್ಯದ ವೇಳೆಗೆ 40 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. ಈ ಮೂಲಕ ಈ ಕ್ಷೇತ್ರದಲ್ಲಿ ಸುಮಲತಾ ಅವರ ಗೆಲುವು ಸಾಧಿಸಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.