ಮಂಡ್ಯದಲ್ಲಿ ಸುಮಲತಾ ಗೆಲುವು ಗ್ಯಾರೆಂಟಿ.!

ಮಂಡ್ಯದಲ್ಲಿ ಸುಮಲತಾ ಗೆಲುವು ಗ್ಯಾರೆಂಟಿ.!

ಮಂಡ್ಯ, . 27, ನ್ಯೂಸ್ ಎಕ್ಸ್ ಪ್ರೆಸ್: 2019ರ ಲೋಕಸಭಾ ಚುನಾವಣೆಯಲ್ಲಿ ಹೈವೋಲ್ಟೇಜ್ ಅಖಾಡವಾಗಿದ್ದ ಮಂಡ್ಯ ರಾಜ್ಯದಲ್ಲಿ ಎಲ್ಲರಿಗೂ ಕೂಡ ಗೊತ್ತಿದೆ.

ಪಕ್ಷೇತರ ಅಭ್ಯರ್ಥಿ ಸುಮಲತಾ 45 ಸಾವಿರ ಮತಗಳ ಅಂತರದಿಂದ ಜಯ ಗಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ವಿವಿಧ ಕ್ಷೇತ್ರಗಳ ಮಾಹಿತಿ ವರದಿಯನ್ನು ಬಿಜೆಪಿ ಜಿಲ್ಲಾ ಚುನಾವಣಾ ಸಮಿತಿಗಳಿಂದ ರಾಜ್ಯ ಚುನಾವಣಾ ಸಮಿತಿಗೆ ಸಲ್ಲಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಜಿಲ್ಲಾ ಚುನಾವಣಾ ಸಮಿತಿಗಳಿಂದ ಚುನಾವಣೆ ನಿರ್ವಹಣೆಯ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸುಮಲತಾ 45 ಸಾವಿರ ಮತಗಳ ಅಂತರದಿಂದ ಜಯ ಗಳಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಸಮಿತಿಯಿಂದ ವರದಿ ಸಲ್ಲಿಸಲಾಗಿದೆ.

ಒಟ್ಟಿನಲ್ಲಿ ಮಂಡ್ಯ ಅಖಾಡದಲ್ಲಿ ಸುಮಲತಾ ಅವರೇ ಜಯಶಾಲಿಯಾಗಬೇಕು ಎಂಬ ಅಭಿಪ್ರಾಯ ಸಾಕಷ್ಟು ಜನರದ್ದಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos