ಬನ್ನೇರುಘಟ್ಟದಲ್ಲಿ ಏಪ್ರಿಲ್ 1ರಿಂದ ಮಕ್ಕಳ ಬೇಸಿಗೆ ಶಿಬಿರ

ಬನ್ನೇರುಘಟ್ಟದಲ್ಲಿ ಏಪ್ರಿಲ್ 1ರಿಂದ ಮಕ್ಕಳ ಬೇಸಿಗೆ ಶಿಬಿರ

ಬೆಂಗಳೂರು: ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಏಪ್ರಿಲ್ 1ರಿಂದ 14ರವರೆಗೆ ಬೇಸಿಗೆ ಶಿಬಿರ ಆಯೋಜಿಸಲಾಗಿದೆ. 11 ರಿಂದ 18 ವರ್ಷ ವಯೋಮಾನದ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಶಿಬಿರಕ್ಕೆ ನೊಂದಾಯಿಸಿಕೊಳ್ಳಬಹುದಾಗಿದೆ. ಗರಿಷ್ಠ 60 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ 3 ಸಾವಿರ ಮತ್ತು ಸರ್ಕಾರ ಶಾಲೆಯ ವಿದ್ಯಾರ್ಥಿಗಳಿಗೆ 1 ಸಾವಿರ ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ.ಮಧ್ಯಾಹ್ನದ ಊಟ ಮತ್ತು ಚಟುವಟಿಕೆಗಳನ್ನು ರೂಪಿಸಲಾಗಿದೆ.

ವಿದ್ಯಾರ್ಥಿಗಳಿಗೆ ಮೃಗಾಲಯ, ಚಿಟ್ಟೆ ಉದ್ಯಾನ, ಸಫಾರಿ ವೀಕ್ಷಣೆ, ಪ್ರಕೃತಿ ನಡಿಗೆ ಮತ್ತು ವನ್ಯ ಜೀವಿಗಳ ನಿರ್ವಹಣೆಯ ಒಳನೋಟವನ್ನು ನೀಡಲಾಗುವುದು ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ವಿಶಾಲ್ ಸೂರ್ಯಸೇನ್ ಅವರು ತಿಳಿಸಿದರು. ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನವು ವನ್ಯಜೀವಿ ಪ್ರೇಮಿಗಳ ಸ್ವರ್ಗವಾಗಿದೆ.

ಬನ್ನೇರುಘಟ್ಟ ಉದ್ಯಾನದ ಬಗ್ಗೆಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನವು ಕರ್ನಾಟಕದಲ್ಲಿನ ಅತ್ಯುತ್ತಮವಾದ ವನ್ಯಜೀವಿ ಧಾಮಗಳಲ್ಲಿ ಒಂದಾಗಿದೆ. ಇದು ಬೆಂಗಳೂರು ನಗರದಿಂದ ಕೇವಲ 22 ಕಿ.ಮೀ ದೂರದಲ್ಲಿದೆ. ಸುಮಾರು 25.000 ಎಕರೆಗಳಷ್ಟು ವಿಸ್ತೀರ್ಣವನ್ನು ಹೊಂದಿರುವ ಈ ಉದ್ಯಾನವನವು ರೋಮಾಂಚಕ ಸಫಾರಿಯನ್ನು ಹೊಂದಿದೆ. ಸಮುದ್ರ ಮಟ್ಟದಿಂದ ಸುಮಾರು 1245 ರಿಂದ 1634 ಮೀಟರ್ ಎತ್ತರದಲ್ಲಿದಲ್ಲಿರುವ ಈ ತಾಣದಲ್ಲಿ ಬಟರ್ ಫ್ಲೈ ಪಾರ್ಕ್, ಬಯೋಲಾಜಿಕಲ್ ರಿಸರ್ವ್, ಚಿಕ್ಕ ವಸ್ತು ಸಂಗ್ರಹಾಲಯ ಕೂಡ ಇವೆ.

ಫ್ರೆಶ್ ನ್ಯೂಸ್

Latest Posts

Featured Videos