ಸುಂಕ ವಸೂಲಾತಿ ಕೇಂದ್ರದಲ್ಲಿ ಅಕ್ರಮ ಹಣ 1.75 ಕೋಟಿ ಪತ್ತೆ!

ಸುಂಕ ವಸೂಲಾತಿ ಕೇಂದ್ರದಲ್ಲಿ ಅಕ್ರಮ ಹಣ 1.75 ಕೋಟಿ ಪತ್ತೆ!

ಚಿಕ್ಕಬಳ್ಳಾಪುರ, ಏ. 4, ನ್ಯೂಸ್ ಎಕ್ಸ್ ಪ್ರೆಸ್: ಕರ್ನಾಟಕ – ಆಂಧ್ರ ಗಡಿಭಾಗದ ಬಾಗೇಪಲ್ಲಿಯ ಸುಂಕ ವಸೂಲಾತಿ ಕೇಂದ್ರದ ವ್ಯವಸ್ಥಾಪಕರ ಕಚೇರಿಯಲ್ಲಿ ಸೂಕ್ತ ದಾಖಲೆಗಳಿಲ್ಲದ 1 ಕೋಟಿ 75 ಲಕ್ಷ ರೂ. ಮೌಲ್ಯದ ಹಣ ಪತ್ತೆಯಾಗಿದೆ. ಕೇಂದ್ರದ ವ್ಯವಸ್ಥಾಪಕ ಸುಬ್ಬಾರೆಡ್ಡಿ ಅವರ ಕಚೇರಿಯಲ್ಲಿ ನಗದು ಪತ್ತೆಯಾಗಿದ್ದು, ಈ ಸಂಬಂಧ ಮಾಹಿತಿ ತಿಳಿದ ಚುನಾವಣಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಕಚೇರಿಗೆ ಭೇಟಿ ನೀಡಿ ಹಣ ವಶಕ್ಕೆ ಪಡೆದಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆ ಚುನಾವಣಾ ಅಕ್ರಮಗಳಿಗೆ ಬಳಸಲು ದೊಡ್ಡ ಮೊತ್ತದ ಹಣ ಸಂಗ್ರಹಿಸಿರುವ ಶಂಕೆ ವ್ಯಕ್ತವಾಗಿದೆ.

ಸ್ವತಃ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ನಟರಾಜ್ ಅವರು ಕೂಡ ಸ್ಥಳಕ್ಕೆ ನೀಡಿದ್ದು, ಐಟಿ ಇಲಾಖಾಧಿಕಾರಿಗಳ ಸಮ್ಮುಖದಲ್ಲಿ ಹಣ ಜಪ್ತಿ ಮಾಡಲು ಚುನಾವಣಾಧಿಕಾರಿಗಳು ಮುಂದಾಗಿದ್ದಾರೆ. ಇದು ಸುಂಕ ವಸೂಲಾತಿ ಕೇಂದ್ರಕ್ಕೆ ಸೇರಿದ ಹಣ ಎಂದು ವ್ಯವಸ್ಥಾಪಕರು ಹೇಳುತ್ತಿದ್ದಾರೆ. ಆದರೆ ಈ ಬಗ್ಗೆ ಸೂಕ್ತ ದಾಖಲೆಗಳನ್ನ ನೀಡಿಲ್ಲ. ಹೀಗಾಗಿ ಅನುಮಾನಗೊಂಡಿರುವ ಚುನಾವಣಾಧಿಕಾರಿಗಳು ಹಣ ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos