ಹುಬ್ಬಳ್ಳಿಯಲ್ಲಿ ಬಂದ್  ಗೆ ಬೆಂಬಲ

ಹುಬ್ಬಳ್ಳಿಯಲ್ಲಿ ಬಂದ್  ಗೆ ಬೆಂಬಲ

ಹುಬ್ಬಳ್ಳಿ, ಫೆ. 13:  ಸಂಗ್ರಾಮ ಸೇನೆ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರಿಂದ ಡಾ.ಸರೋಜಿನಿ ಮಹಿಷಿ ವರದಿ ಜಾರಿಗಾಗಿ ಆಗ್ರಹಿಸಿ ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.

ಒತ್ತಾಯಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿರುವ ಸಂಘಟನೆಯ ಕಾರ್ಯಕರ್ತರು. ಸಂಗೊಳ್ಳಿ ರಾಯಣ್ಣ ವೃತ್ತ, ಜನತಾಬಜಾರ್ ಮಾರುಕಟ್ಟೆ ಪ್ರದೇಶಗಳಲ್ಲಿ ಅಂಗಡಿಗಳಿಗೆ, ಮತ್ತು ವ್ಯಾಪಾರಸ್ಥರಲ್ಲಿ ತೆರಳಿ ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್ ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ತಳ್ಳುವ ಗಾಡಿ ಹಿಡಿದು ವಿಭಿನ್ನವಾಗಿ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಡಾ.ಸರೋಜಿನಿ ಮಹಿಷಿ ವರದಿ ಜಾರಿ ಮಾಡಬೇಕು. ವರದಿ ಜಾರಿಗೊಳಿಸಿ ಕನ್ನಡಿಗರಿಗೆ ನ್ಯಾಯ ಒದಗಿಸಿಕೊಡಬೇಕು, ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕೆಂದು, ಉದ್ಯೋಗ ವಿಷಯದಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪ ಮಾಡಿದರು.

ಪ್ರತಿಭಟನೆ ನಂತರ ತಹಶೀಲ್ದಾರರ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಿರುವ ಕಾರ್ಯಕರ್ತರು.

ಫ್ರೆಶ್ ನ್ಯೂಸ್

Latest Posts

Featured Videos