ಸರ್ವೆಗಾಗಿ ಅರ್ಜಿ ಸಲ್ಲಿಸಿದ ರೈತರಿಗೆ ‘ಸಿಹಿ ಸುದ್ದಿ’

ಸರ್ವೆಗಾಗಿ ಅರ್ಜಿ ಸಲ್ಲಿಸಿದ ರೈತರಿಗೆ ‘ಸಿಹಿ ಸುದ್ದಿ’

ಬೆಂಗಳೂರು, ಏ. 11, ನ್ಯೂಸ್ ಎಕ್ಸ್ ಪ್ರೆಸ್: ಕಳೆದ 5 ವರ್ಷದ ಅವಧಿಯಲ್ಲಿ ಸರ್ವೆ ಇಲಾಖೆಗೆ ಬರೋಬ್ಬರಿ 53 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಸುಮಾರು 22 ಲಕ್ಷ ಅರ್ಜಿಗಳು ಬಾಕಿ ಉಳಿದಿವೆ. ಜಮೀನಿನ ಸರ್ವೆ ಮಾಡಿಸಿಕೊಳ್ಳಲು ಅರ್ಜಿ ಸಲ್ಲಿಸಿ ವರ್ಷಾನುಗಟ್ಟಲೆ ಕಚೇರಿಗಳಿಗೆ ಅಲೆದಾಡುತ್ತಿರುವ ರೈತರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸರ್ವೆ ಅರ್ಜಿಗಳ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಅವರು, ಭೂಮಾಪನ ಇಲಾಖೆಗೆ ಸೂಚನೆ ನೀಡಿದ್ದಾರೆ. ಒಂದು ತಿಂಗಳೊಳಗೆ ರೈತರು ಸರ್ವೆಗಾಗಿ ಸಲ್ಲಿಸಿರುವ ಅರ್ಜಿಯನ್ನು ವಿಲೇವಾರಿ ಮಾಡಬೇಕು ಎಂದು ತಿಳಿಸಿದ್ದು, ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಇಲಾಖೆಯ ಆಯುಕ್ತರಿಗೆ ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos