ಎಂಎಸ್ ದಾಖಲೆ ಮುರಿದ ಸೂರ್ಯ!

ಎಂಎಸ್ ದಾಖಲೆ ಮುರಿದ ಸೂರ್ಯ!

ಬೆಂಗಳೂರು: ದಕ್ಷಿಣ ಆಫ್ರಿಕಾ ನೆಲದಲ್ಲಿ ಗೆಲುವಿನ ಮೂಲಕ ಶುಭಾರಂಭ ಮಾಡಬೇಕು ಎಂಬ ಭಾರತ ತಂಡದ ಕನಸು ಈಡೇರಲಿಲ್ಲ. ಡರ್ಬನ್​ನಲ್ಲಿ ನಡೆಯಬೇಕಿದ್ದ ಭಾರತ ಹಾಗೂ ದಕ್ಷಿಣ ಆಫ್ರಿಕಾ  ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾದರೆ, ಎರಡನೇ ಪಂದ್ಯದಲ್ಲಿ ಸೋಲುಂಡಿತು.

ಆದರೆ, ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಧೋನಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದಿದ್ದಾರೆ. ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಸೂರ್ಯಕುಮಾರ್ ಯಾದವ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆರಂಭದಿಂದಲೇ ಸೌತ್ ಆಫ್ರಿಕಾ ಬೌಲರ್​ಗಳನ್ನು ಬೆಂಡೆತ್ತುವ ಮೂಲಕ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ 36 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 56 ರನ್ ಬಾರಿಸಿದರು.

2007 ರಲ್ಲಿ ಸೌತ್ ಆಫ್ರಿಕಾ ವಿರುದ್ಧ ಭಾರತ ತಂಡದ ನಾಯಕ ಎಂಎಸ್ ಧೋನಿ 45 ರನ್ ಬಾರಿಸಿದ್ದು ಗರಿಷ್ಠ ಸ್ಕೋರ್​ ಆಗಿತ್ತು. ಇದೀಗ 56 ರನ್​ ಬಾರಿಸುವ ಮೂಲಕ ಸೌತ್ ಆಫ್ರಿಕಾ ವಿರುದ್ಧ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಭಾರತದ ನಾಯಕ ಎಂಬ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos