ನಾಮಪತ್ರ ಹಿಂಪಡೆದ ದಿಂಗಾಲೇಶ್ವರ ಸ್ವಾಮೀಜಿ

ನಾಮಪತ್ರ ಹಿಂಪಡೆದ ದಿಂಗಾಲೇಶ್ವರ ಸ್ವಾಮೀಜಿ

ದಾರವಾಡ: ಹುಬ್ಬಳ್ಳಿ-ದಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ  ಸ್ಪರ್ಧಿಸಿದ್ದ ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಅವರು ನಾಮಪತ್ರವನ್ನ ವಾಪಸ್ ಪಡೆದಿದ್ದಾರೆ.

ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಸೂಚಕಾರದ ಸಚ್ಚಿನ್​ ಪಾಟೀಲ್​ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ನಾಮಪತ್ರ ಚುನಾವಣಾ ಆಯೋಗದಿಂದ ತರೆಸಿದ್ದಾರೆ.  ದಿಂಗಾಲೇಶ್ವ ಸ್ವಾಮೀಜಿ ಅವರು, ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರನ್ನು ಸೋಲಿಸುವುದು ನನ್ನ ಗುರಿ’ ಎಂದಿದ್ದರು.

ಆದರೆ ಈಗ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್​ ಜೋಶಿ ವಿರುದ್ಧ ಹುಬ್ಬಳ್ಳಿ-ದಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕೆ ಇಳಿದಿದ್ದರು. ಇದೀಗ ದಿಂಗಾಲೇಶ್ವರ ಶ್ರೀಗಳು ನಾಮಪತ್ರ ಹಿಂಪಡೆದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos