ವಿಶ್ವೇಶತೀರ್ಥ ಸ್ವಾಮೀಜಿ ಆರೋಗ್ಯ ಸ್ಥಿತಿ ಗಂಭೀರ

ವಿಶ್ವೇಶತೀರ್ಥ ಸ್ವಾಮೀಜಿ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು, ಡಿ. 21: ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರೋಗ್ಯದ ಪರಿಸ್ಥಿತಿ ಗಂಭೀರವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನಿನ್ನೆ ಬೆಳಗಿನ ಗಂಟೆಗೆ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರ ನಿಗಾ ಘಟಕದಲ್ಲಿಟ್ಟು ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವೆಂಟಿಲೇಟರ್ ಮೂಲಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಡಾ. ಸುಧಾ ವಿದ್ಯಾಸಾಗರ್ ಅವರ ತಂಡ ತಿಳಿಸಿದೆ. ಪೇಜಾವರ ಶ್ರೀಗಳು ಗುಣಮುಖರಾಗಿ ಬರಲೆಂದು ಮಠದಲ್ಲಿನ ಭಕ್ತರು, ಜನರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos