ಬೆಂಗಳೂರು: ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟಿ ವರಲಕ್ಷ್ಮಿ ಶರತ್ಕುಮಾರ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮಾಣಿಕ್ಯ ಚಿತ್ರದಲ್ಲಿ ನಟಿಸಿದ್ದ ನಟಿ ವರಲಕ್ಷ್ಮೀ ಶರತ್ ಕುಮಾರ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಮ್ಮ 38 ನೇ ವಯಸ್ಸಿನಲ್ಲಿ ಬಾಯ್ ಫ್ರೆಂಡ್ ಜೊತೆ ಎಂಗೇಜ್ ಮೆಂಟ್ ಮಾಡಿಕೊಂಡು ಅಭಿಮಾನಿಗಳಿಗೆ ಸರ್ಪೈಸ್ ನೀಡಿದ್ದಾರೆ.
ಮಾರ್ಚ್ 1 ರಂದು ಖಾಸಗಿ ಕಾರ್ಯಕ್ರಮದಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸದ್ಯದಲ್ಲೇ ಇಬ್ಬರ ಮದುವೆ ದಿನಾಂಕ ಘೋಷಣೆಯಾಗಲಿದೆ ಎಂದು ವರದಿಯಾಗಿದೆ.
ಈ ಬಗ್ಗೆ ನಟಿ ಟಿ ವರಲಕ್ಷ್ಮಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಎಂಗೇಜ್ ಆದೆ.. ನಗುವನ್ನು ನಾನು ಪ್ರೀತಿಸುತ್ತೇನೆ ಮತ್ತು ಯಾವಾಗಲೂ ಸಂತೋಷದಿಂದ ಇರುತ್ತೇನೆ..ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.