ಬೆಂಗಳೂರು, ಸೆ. 6: ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ಕಾರಿ ನೌಕರರು ಬಹುದಿನಗಳಿಂದ ನಿರೀಕ್ಷೆ ಮಾಡುತ್ತಿದ್ದ 6ನೇ ವೇತನ ಆಯೋಗದ ಶಿಫಾರಸ್ಸಿಗೆ, ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಈ ಮೂಲಕ ಶೀಘ್ರದಲ್ಲಿಯೇ 6ನೇ ವೇತನ ಆಯೋಗದಂತೆ ಸರ್ಕಾರಿ ನೌಕರರು ವೇತನವನ್ನು ಪಡೆಯಲಿದ್ದಾರೆ.
ಈ ಕುರಿತು ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದು, 6ನೇ ವೇತನ ಆಯೋಗದ ಶಿಫಾರಸ್ಸಿಗೆ ಇಂದು ನಡೆಸ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕವಾಗಿ ಒಪ್ಪಿಗೆ ನೀಡಲಾಗಿದೆ. ರಾಜ್ಯದ ಸರ್ಕಾರಿ ನೌಕರರಿಗೆ 6ನೇ ವೇತನ ಆಯೋಗದ ಜಾರಿಯಿಂದಾಗಿ, ರಾಜ್ಯ ಸರ್ಕಾರದ ಬೊಕ್ಕಸಕ್ಕೆ 382 ಕೋಟಿ ಹೆಚ್ಚುವರಿ ಹೊರೆ ಆಗಲಿದೆ ಎಂದು ತಿಳಿಸಿದರು.