ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ದೀಪಿಕಾ ದಾಸ್

ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ದೀಪಿಕಾ ದಾಸ್

ಬೆಂಗಳೂರು: ಕಿರುತೆರೆಯ ನಟಿ ದೀಪಿಕಾ ದಾಸ್ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸದ್ದಿಲ್ಲದೇ ಬಿಗ್ ಬಾಸ್ ಬೆಡಗಿ ಹಸೆಮಣೆ ಏರಿದ್ದಾರೆ. ಮದುವೆಯ ಸುಂದರ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.

ದುಬೈನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಉದ್ಯಮಿ ಜೊತೆ ದೀಪಿಕಾ ದಾಸ್ ಮದುವೆ ಆಗಿದ್ದಾರೆ. ಗೋವಾನಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ನಡೆದಿದೆ. ಗೋವಾದ ಕಡಲ ತಡಿಯಲ್ಲಿ ಖಾಸಗಿಯಾಗಿ ವಿವಾಹ ಕಾರ್ಯಕ್ರಮ ನಡೆದಿದ್ದು, ವಧು-ವರರ ಕುಟುಂಬ ಸದಸ್ಯರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು.

ದೀಪಿಕಾ ದಾಸ್ ‘ನಾಗಿಣಿ’ ಧಾರಾವಾಹಿ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು. ಬಿಗ್​ಬಾಸ್​ ಕನ್ನಡದಲ್ಲಿ ಸ್ಪರ್ಧಿಯಾಗಿಯೂ ಭಾಗಿಯಾಗಿದ್ದರು. ಇದೀಗ ತಮ್ಮ ಮದುವೆಯ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ದೀಪಿಕಾ ದಾಸ್, ‘ಸಾಹಸಮಯ ಪ್ರಯಾಣಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.

ದೀಪಿಕಾ ಮದುವೆಯಲ್ಲಿ ಎರಡು ಕುಟುಂಬದ ಸದಸ್ಯರು, ಆಪ್ತರಷ್ಟೇ ಭಾಗಿದ್ದರು ಎನ್ನಲಾಗಿದೆ. ಮದುವೆಯ ಸುಂದರ ಫೋಟೋಗಳನ್ನು ಶೇರ್ ಮಾಡಿದ್ದಾರೆ.ಈ ಮೂರು ಫೋಟೋಗಳನ್ನು ಹಂಚಿಕೊಂಡಿರುವ ದೀಪಿಕಾ ದಾಸ್ ‘ಮಿಸ್ಟರ್ & ಮಿಸೆಸ್ ಡಿʼ ಎಂದು ಕ್ಯಾಪ್ಷನ್ ನೀಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos