ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ ಕಾಂಗ್ರೆಸ್ ಸರ್ಕಾರ!

ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ ಕಾಂಗ್ರೆಸ್ ಸರ್ಕಾರ!

ಬೆಂಗಳೂರು: ಲೋಕಸಭೆ ಚುನಾವಣೆಗೆ ಇನ್ನೂ ಕೆಲವೇ ದಿನಗಳಿದೆ. ಕಾಂಗ್ರೆಸ್ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಮಹಿಳೆಯರಿಗೆ ವಿಶೇಷ ಗ್ಯಾರಂಟಿ ಯೋಜನೆ ಘೋಷಿಸಿ ಅಧಿಕಾರ ಪಡೆದಿದೆ. ಇದೀಗ ಲೋಕಸಭೆಯಲ್ಲೂ ಗೆಲುವು ಸಾಧಿಸಲು ಹೊಸ ಯೋಜನೆಗಳನ್ನು ಘೋಷಿಸಲು ಆರಂಭಿಸಿದೆ. ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ‘ನಾರಿ ನ್ಯಾಯ’ ಗ್ಯಾರಂಟಿ ಘೋಷಣೆ ಮಾಡಿದೆ.

ಯಜಮಾನಿಯರಿಗೆ ಕಾಂಗ್ರೆಸ್ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು ಪ್ರತಿ ವರ್ಷ 1 ಲಕ್ಷ ಹಣ ಖಾತೆಗೆ ಜಮ್ಮ ಮಾಡುವುದಾಗಿ ಘೋಷಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸುದ್ದಿಗೋಷ್ಠಿ ನಡೆಸಿ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು ಇದೀಗ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಮಹಿಳೆಯರ ಮಹಾಲಕ್ಷ್ಮಿ ಯೋಜನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಮೂಲಕ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಲ್ಲಿ ದೇಶದ ಬಡಕುಟುಂಬಗಳ ಯಜಮಾನರಿಗೆ ತಲಾ 1 ಲಕ್ಷ ರೂ ಆರ್ಥಿಕ ನೆರವು ನೀಡಲಾಗುವುದು ಎಂದೇ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ ಇದಕ್ಕೆ ನಮ್ಮ ಸರ್ಕಾರದ ಸಾಧನೆಗಳು ಸಾಕ್ಷಿ ಎಂದಿದ್ದಾರೆ.

ದೇಶದಾದ್ಯಂತ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಹಿಳೆಯರಿಗೆ ಪ್ರತಿ ವರ್ಷ ಒಂದು ಲಕ್ಷ ಹಣಕಾಸಿನ ನೆರವು ನೀಡಲಾಗುತ್ತದೆ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ಮಾಡಲಾಗುತ್ತಿದೆ ನಿಮ್ಮ ಒಂದು ಮತದಿಂದ ಸಮಾಜ ನಿರ್ಮಾಣದ ಗ್ಯಾರಂಟಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ

ಫ್ರೆಶ್ ನ್ಯೂಸ್

Latest Posts

Featured Videos