ಸಂಕ್ರಾಂತಿ ಹಬ್ಬಕ್ಕೆ ಸಿಹಿ ಪೊಂಗಲ್

ಸಂಕ್ರಾಂತಿ ಹಬ್ಬಕ್ಕೆ ಸಿಹಿ ಪೊಂಗಲ್

ಬೆಂಗಳೂರು, ಜ. 14: ಮಕರ ಸಂಕ್ರಾಂತಿ ಹಬ್ಬ ಎಂದಾಕ್ಷಣ ನೆನಪಿಗೆ ಬರುವುದು ಎಳ್ಳು-ಬೆಲ್ಲ, ಕಬ್ಬು, ಗಾಳಿಪಟ, ಗಸಗಸೆ ಪಾಯಸ, ಜೊತೆಗೆ ಸಿಹಿ-ಸಿಹಿಯಾದ ಪೊಂಗಲ್. ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್.

ಬೇಕಾಗುವ ಸಾಮಗ್ರಿಗಳು:

  1. ಹೆಸರುಬೇಳೆ – 1 ಕಪ್
  2. ಅಕ್ಕಿ – 1 ಕಪ್
  3. ಪುಡಿ ಮಾಡಿದ ಬೆಲ್ಲ/ ಸಕ್ಕರೆ – 1 ಕಪ್
  4. ಏಲಕ್ಕಿ – 4
  5. ದ್ರಾಕ್ಷಿ ,ಗೋಡಂಬಿ- 50 ಗ್ರಾಂ
  6. ತುಪ್ಪ – 4 ಚಮಚ

ಮಾಡುವ ವಿಧಾನ:

ಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು ಹಾಕಿ ಅದು ಕೆಂಪಾಗುವ ತನಕ ಕಡಿಮೆ ಉರಿಯಲ್ಲಿ ಹುರಿಯಿರಿ.

ನಂತರ ಕುಕ್ಕರ್ ನಲ್ಲಿ ತೊಳೆದ ಅಕ್ಕಿ ಮತ್ತು ಹುರಿದ ಹೆಸರುಬೇಳೆ ಹಾಕಿ 4 ಕಪ್ ನೀರು ಹಾಕಿ ಒಂದು ವಿಷಲ್ ಬರುವ ತನಕ ಬೇಯಿಸಿ.

ಮತ್ತೊಂದು ಪ್ಯಾನ್ ನಲ್ಲಿ ಪುಡಿಮಾಡಿದ ಬೆಲ್ಲ ಹಾಕಿ ಕರಗಿಸಿ. ಈಗ ಬೆಂದ ಅಕ್ಕಿ ಮತ್ತು ಬೇಳೆಗೆ ಬೆಲ್ಲದ ಪಾಕ ಹಾಕಿ ಚೆನ್ನಾಗಿ ತಿರುವಿ. ನಂತರ ಪುಡಿ ಮಾಡಿದ ಏಲಕ್ಕಿ, ತುಪ್ಪದಲ್ಲಿ ಕರಿದ ದ್ರಾಕ್ಷಿ ಗೋಡಂಬಿ ಹಾಕಿ ಒಲೆಯಿಂದ ಇಳಿಸಿ. ಈಗ ಸಂಕ್ರಾಂತಿ ಹಬ್ಬಕ್ಕೆ ರುಚಿ ರುಚಿಯಾದ ಸಿಹಿ ಪೊಂಗಲ್ ಸವಿಯಲು ರೆಡಿ

 

ಫ್ರೆಶ್ ನ್ಯೂಸ್

Latest Posts

Featured Videos