ಮೈಸೂರು: ಈಜಲು ಹೋಗಿ ವಿದ್ಯಾರ್ಥಿಗಳಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆಯಲ್ಲಿ ಸಂಭವಿಸಿದೆ.
ಕೆ.ಆರ್.ನಗರ ತಾಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮದ ಲೋಕೇಶ್ (16) ಹಾಗೂ ಹೊಳೆನರಸೀಪುರ ಆನೆ ಕನ್ನಾಳವಾಡಿ ಗ್ರಾಮದ ಹರ್ಷ (11) ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ. ಚುಂಚನಕಟ್ಟೆಯಲ್ಲಿರುವ ಶ್ರೀರಾಮದೇವಾಲಯಕ್ಕೆ ಪೂಜೆಗೆ ಆಗಮಿಸಿದ್ದ ವೇಳೆಯಲ್ಲಿ ಸಮೀಪದಲ್ಲಿರುವ ಕಾವೇರಿ ನದಿಯಲ್ಲಿ ಈಜಲು ಹೋಗಿ, ನೀರಿನ ಸುಳಿಯಲ್ಲಿ ಸಿಲುಕಿ ನೀರಿನಿಂದ ಹೊರಬರಲಾರದೇ ಅಲ್ಲಿಯೇ ಮೃತಪಟ್ಟಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮೃತ ವಿದ್ಯಾರ್ಥಿಗಳ ದೇಹವನ್ನು ಹೊರ ತೆಗೆದು, ಕೆ.ಆರ್.ನಗರ ಆಸ್ಪತ್ರೆಯ ಶವಗಾರಕ್ಕೆ ಶವಪರೀಕ್ಷೆಗೆ ರವಾನಿಸಿದ್ದಾರೆ. ಇನ್ನು ಮಕ್ಕಳ ಮೃತದೇಹ ನೋಡಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.