ಟಾಟಾ ಮೆಮೋರಿಯಲ್ ಸೆಂಟರ್ (ಟಿಎಂಸಿ) ನೇಮಕಾತಿ

ಟಾಟಾ ಮೆಮೋರಿಯಲ್ ಸೆಂಟರ್ (ಟಿಎಂಸಿ)  ನೇಮಕಾತಿ

ಮುಂಬೈ, ಏ. 29, ನ್ಯೂಸ್ ಎಕ್ಸ್ ಪ್ರೆಸ್: ಟಾಟಾ ಮೆಮೋರಿಯಲ್ ಸೆಂಟರ್ (ಟಿಎಂಸಿ) ನೇಮಕಾತಿ ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಮೆಡಿಕಲ್ ಸೂಪರಿಂಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಎಂ.ಡಿ, ಡಿ.ಎಂ, ಸ್ನಾತಕೋತ್ತರ ಪದವಿ,ಎಂಬಿಬಿಎಸ್,ಎಂ.ಹೆಚ್.ಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನದ ವಿವರ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/-ರಿಂದ 39,100/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 300/-ರೂ , ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳೂ ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಭ್ಯರ್ಥಿಗಳು ಮೊದಲು ಆನ್ಲೈನ್ನಲ್ಲಿ ಅಧಿಕೃತ ವೆಬ್ ಸೈಟ್ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ನಂತರ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 7,2019 ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ: ಹೆಚ್.ಆರ್.ಡಿಪಾರ್ಟ್ಮೆಂಟ್, 2 ನೇ ಮಹಡಿ, ಸರ್ವೀಸ್ ಬ್ಲಾಕ್, ಟಾಟಾ ಮೆಮೋರಿಯಲ್ ಹಾಸ್ಪಿಟಲ್,ಮುಂಬೈ-400012

 

ಫ್ರೆಶ್ ನ್ಯೂಸ್

Latest Posts

Featured Videos