ಕುಣಿಗಲ್, ಅ.25 : ಜಲ್ಲಿ ಕಲ್ಲು ತುಂಬಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿ ಒಬ್ಬ ಗಂಭೀರ ಗಾಯಗೊಂಡಿರುವ ಘಟನೆ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಮೃತೂರು ಹೋಬಳಿ, ದೊಡ್ಡಕಲ್ಲಹಳ್ಳಿ ಗ್ರಾಮದ ನಿವಾಸಿಗಳಾದ ಕಿರಣ್(24), ರಾಜಣ್ಣ(58), ಮೋಹನ್(28), ಮಧು(23), ಹೊಸದುರ್ಗ ಹೋಬಳಿ ರಂಗಸ್ವಾಮಿ(21) ಮೃತ ದುರ್ದೈವಿಗಳು. ಮೃತರೆಲ್ಲರೂ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ರಂಗಸ್ವಾಮಿ ಅನಾರೋಗ್ಯದ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿ ವಾಪಸ್ ಸ್ವಗ್ರಾಮಕ್ಕೆ ಹಿಂತಿರುಗುವಾಗ ಈ ದುರ್ಘಟನೆ ನಡೆದಿದೆ.