ʼಟಗರು ಪಲ್ಯ’ ರಾಜ್ಯಾದ್ಯಾಂತ ತೆರೆಮೇಲೆ

ʼಟಗರು ಪಲ್ಯ’ ರಾಜ್ಯಾದ್ಯಾಂತ ತೆರೆಮೇಲೆ

 ಬೆಂಗಳೂರು: ‘ಟಗರು ಪಲ್ಯ’ ಕಥೆ ನಡೆಯುವುದು ಒಂದೇ ದಿನದಲ್ಲಿ. ಯಾವುದೇ ಫ್ಲ್ಯಾಶ್​ ಬ್ಯಾಕ್​ ಕೂಡ ಬರುವುದಿಲ್ಲ. ಬಹುತೇಕ ಒಂದೇ ಲೊಕೇಷನ್​ನಲ್ಲಿ ಮುಂಜಾವಿನಿಂದ ಸಂಜೆ ತನಕ ನಡೆಯುವ ಇಂಥ ಕಥೆಯನ್ನು ಬೋರು ಹೊಡೆಸದಂತೆ ಕಟ್ಟಿಕೊಡುವುದು ಸವಾಲಿನ ಕೆಲಸ. ಅದನ್ನು ನಿರ್ದೇಶಕ ಉಮೇಶ್​ ಚೆನ್ನಾಗಿ ನಿಭಾಯಿಸಿದ್ದಾರೆ.

ಹಳ್ಳಿ ಸೊಗಡಿನ ಕಥೆಯನ್ನು ಇಟ್ಟುಕೊಂಡು ನಿರ್ಮಾಣವಾದ ಅನೇಕ ಸಿನಿಮಾಗಳು ಸೂಪರ್​ ಹಿಟ್​ ಆದ ಉದಾಹರಣೆ ಇದೆ. ಇತ್ತೀಚೆಗೆ ಇಂಥ ಸಿನಿಮಾಗಳ ಸಂಖ್ಯೆ ಕಡಿಮೆ ಆಗಿದೆ ಎಂದೇ ಹೇಳಬಹುದು. ಆ ಕೊರತೆಯನ್ನು ನೀಗಿಸುವ ರೀತಿಯಲ್ಲಿ ‘ಟಗರು ಪಲ್ಯ’ ಸಿನಿಮಾ ಮೂಡಿಬಂದಿದೆ. ಹೊಸ ನಿರ್ದೇಶಕ ಉಮೇಶ್​ ಕೆ. ಕೃಪಾ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಡಾಲಿ ಧನಂಜಯ್​ ಅವರು ಒಂದು ವಿಶಿಷ್ಠವಾದ ಕಥೆಗೆ ಬಂಡವಾಳ ಹೂಡಿದ್ದಾರೆ. ಪ್ರತಿಭಾವಂತ ಕಲಾವಿದರ ಸಂಗಮದಿಂದಾಗಿ ಈ ಚಿತ್ರದ ಮೆರುಗು ಹೆಚ್ಚಿದೆ. ಹಲವು ಭಾವಗಳ ಮಿಶ್ರಣದಂತೆ ‘ಟಗರು’ ಸಿನಿಮಾ ಮೂಡಿಬಂದಿದೆ.

ಈ ಚಿತ್ರಕ್ಕೆ ನಾಗಭೂಷಣ ಹೀರೋ, ಅಮೃತಾ ಪ್ರೇಮ್​ ಹೀರೋಯಿನ್.  ಆದರೆ ಅವರನ್ನೂ ಮೀರಿಸುವ ರೀತಿಯಲ್ಲಿ ರಂಗಾಯಣ ರಘು ಮತ್ತು ತಾರಾ ಅನುರಾಧಾ ಅವರ ಪಾತ್ರಗಳು ಮೂಡಿಬಂದಿವೆ. ಇಡೀ ಸಿನಿಮಾವನ್ನು ರಂಗಾಯಣ ರಘು ಅವರು ಆವರಿಸಿಕೊಂಡಿದ್ದಾರೆ. ಮಗಳಿಗೆ ಮದುವೆ ಮಾಡಬೇಕು ಎಂದು ಸಿಕ್ಕಾಪಟ್ಟೆ ಕಷ್ಟಪಡುವ ತಂದೆಯ ಪಾತ್ರವನ್ನು ಅವರು ಸಮರ್ಥವಾಗಿ ನಿಭಾಯಿಸಿದ್ದಾರೆ. ಅವರ ಪತ್ನಿಯ ಪಾತ್ರದಲ್ಲಿ ನಟಿ ತಾರಾ ಕೂಡ ಉತ್ತಮವಾಗಿ ನಟಿಸಿದ್ದಾರೆ. ಈ ಸಿನಿಮಾದ ಎಲ್ಲ ಪಾತ್ರಗಳಿಗೂ ಅವುಗಳದ್ದೇ ಆದಂತಹ ಮಹತ್ವ ಇದೆ. ಚಿತ್ರಾ ಶೆಣೈ, ವಾಸುಕಿ ವೈಭವ್​, ಶ್ರೀನಾಥ ವಸಿಷ್ಠ, ಹುಲಿ ಕಾರ್ತಿಕ್​, ಶರತ್​ ಲೋಹಿತಾಶ್ವ, ವೈಜನಾಥ ಬೀರಾದರ, ಚಂದ್ರಕಲಾ ಸೇರಿದಂತೆ ಎಲ್ಲ ಕಲಾವಿದರು ‘ಟಗರು ಪಲ್ಯ’ ಸಿನಿಮಾದ ಮೆರುಗು ಹೆಚ್ಚಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos