ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ

  • In State
  • August 24, 2020
  • 278 Views
ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ

ಸಿರುಗುಪ್ಪ : ಬೆಳಗಾವಿ ತಾಲ್ಲೂಕಿನ ಪೀರನವಾಡಿಯ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ತೆಗೆಯುವ ಮೂಲಕ ಸಂಗೊಳ್ಳಿ ರಾಯಣ್ಣ ಆಚರಣೆಗೆ ತಡೆಯೊಡ್ಡಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತಾಲ್ಲೂಕು ಕಛೇರಿ ಮುಂದೆ ಪ್ರತಿಭಟನೆ ಮಾಡಿ ತಾಲ್ಲೂಕು ಹಾಲುಮತ ಮಹಾಸಭಾ ಸಂಘದಿಂದ ತಹಸೀಲ್ದಾರ ಗ್ರೇಡ್ 2 ವಿಶ್ವನಾಥ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ನಂತರ ಮಾತನಾಡಿದ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷ ಕಂಬಳಿ ಮಲ್ಲಿಕಾರ್ಜುನ ಪಿರನವಾಡಿ, ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಪುನರ್ ಪ್ರತಿಷ್ಠಾಪನೆ ಮಾಡಬೇಕು ಹಾಗೂ ರಾಯಣ್ಣ ಜಯಂತಿ ಮಾಡುವುದಕ್ಕೆ ಅವಕಾಶ ಕಲ್ಪಿಸಬೇಕು. ಒಂದು ವೇಳೆ ಸಾಧ್ಯವಾಗದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos