ಟಾಸ್‌ ಗೆದ್ದ ಟೀಮ್‌ ಇಂಡಿಯಾ ಫೀಲ್ಡಿಂಗ್‌ ಆಯ್ಕೆ

ಟಾಸ್‌ ಗೆದ್ದ ಟೀಮ್‌ ಇಂಡಿಯಾ ಫೀಲ್ಡಿಂಗ್‌ ಆಯ್ಕೆ

ಕಟಕ್‌ , ಡಿ. 22: ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಚೆನ್ನೈ ಮತ್ತು ವಿಶಾಖಪಟ್ಟಣದಲ್ಲಿ ನಡೆದ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಭಾರತ ಟಾಸ್‌ ಸೋತಿತ್ತು.  ಚೆನ್ನೈ ಪಂದ್ಯದಲ್ಲಿ ಭಾರತ 8 ವಿಕೆಟ್‌ ಹೀನಾಯ ಸೋಲುಂಡರೂ, ವೈಝಾಗ್‌ನಲ್ಲಿ 107 ರನ್‌ ಗೆಲುವಿನೊಂದಿಗೆ ಭರ್ಜರಿ ತಿರುಗೇಟು ನೀಡಿ ಸರಣಿಯನ್ನು 1-1ರಲ್ಲಿ ಸಮಬಲ ತಂದುಕೊಂಡಿದೆ.

ಟೀಮ್‌ ಇಂಡಿಯಾ ಈ ವರ್ಷದ ತನ್ನ ಕೊನೆಯ ಏಕದಿನ ಕ್ರಿಕೆಟ್‌ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಗೆದ್ದು ಯಶಸ್ಸಿನ ಅಲೆಯಲ್ಲಿ ಹೊಸ ವರ್ಷಕ್ಕೆ ಮುಂದಾಗುವುದನ್ನು ಎದುರು ನೋಡುತ್ತಿದೆ. ಇಲ್ಲಿನ ಬಾರಬತಿ ಕ್ರೀಡಾಂಗಣದಲ್ಲಿ ಭಾನುವಾರ ಭಾರತ ಮತ್ತು ವೆಸ್ಟ್‌ ಇಂಡೀಸ್‌ ನಡುವಣ ಏಕದಿನ ಕ್ರಿಕೆಟ್‌ ಸರಣಿಯ ಕೊನೆಯ ಹಾಗೂ ನಿರ್ಣಾಯಕ ಪಂದ್ಯ ನಡೆಯಲಿದೆ.

 

 

 

ಫ್ರೆಶ್ ನ್ಯೂಸ್

Latest Posts

Featured Videos