ಏಕದಿನ, ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಯ್ಕೆ

ಏಕದಿನ, ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಯ್ಕೆ

ಮುಂಬೈ, ಜು. 20 : ವೆಸ್ಟ್ ಇಂಡೀಸ್ ವಿರುದ್ಧದ ಟಿ20, ಏಕದಿನ ಮತ್ತು ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಯ್ಕೆ ಪ್ರಕ್ರಿಯೆ ನಾಳೆ ನಡೆಯಲಿದ್ದು, ನಾಯಕ ವಿರಾಟ್ ಕೊಹ್ಲಿ ಆಯ್ಕೆ ಪ್ರಕ್ರಿಯೆ ವೇಳೆ ಹಾಜರಿರಲಿದ್ದಾರೆ. ಇದರೊಂದಿಗೆ ಈ ಸರಣಿಗೆ ಕೊಹ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಕೊಹ್ಲಿ ನಾಯಕರಾಗಿ ಮುಂದುವರಿಯಲಿದ್ದಾರೆ.
ಆದರೆ ಧೋನಿ ಭವಿಷ್ಯದ ಬಗ್ಗೆ ಈ ಆಯ್ಕೆ ಸಮಿತಿ ಸಭೆಯಲ್ಲಿ ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬ ಕುತೂಹಲ ಮೂಡಿದೆ. ವಿರಾಟ್ ತಮ್ಮ ನೆಚ್ಚಿನ ‘ಕ್ಯಾಪ್ಟನ್’ ಪರವಾಗಿ ಬ್ಯಾಟ್ ಬೀಸುತ್ತಾರಾ ಅಥವಾ ಭವಿಷ್ಯದ ದೃಷ್ಟಿಯಿಂದ ಧೋನಿಗೆ ವಿಶ್ರಾಂತಿ ನೀಡಬಹುದಾ ಎಂಬುದು ಸದ್ಯದ ಕುತೂಹಲ.

ಫ್ರೆಶ್ ನ್ಯೂಸ್

Latest Posts

Featured Videos