ನಾಮಪತ್ರ ಸಲ್ಲಿಸಿದ ತೇಜಸ್ವಿ ಸೂರ್ಯ

ನಾಮಪತ್ರ ಸಲ್ಲಿಸಿದ ತೇಜಸ್ವಿ ಸೂರ್ಯ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಬೆಂಗಳೂರು ದಕ್ಷಿಣ ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ಅವರು ಸಾವಿರಾರು ಬಿಜೆಪಿ ಕಾರ್ಯಕರ್ತರ ಜೊತೆ ನಾಮಪತ್ರ ಸಲ್ಲಿಸಿದರು.

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ್ದರಿಂದ ಬೃಹತ್​ ಮೆರವಣಿಗೆ ಮೂಲಕ ಜಯನಗರದ BBMP ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ವೇಳೆ ವಿರೋಧ ಪಕ್ಷದ ನಾಯಕರಾದ ಶ್ರೀ ಆರ್ ಅಶೋಕ್, ಕೇಂದ್ರ ಸಚಿವರಾದ ಅನುರಾಗ್ ಸಿಂಗ್ ಠಾಕೂರ್, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸತೀಶ್ ರೆಡ್ಡಿ, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ.ಎ.ಶರವಣ ಅವರ ಉಪಸ್ಥಿತಿಯದ್ದರು.

 

 

ಫ್ರೆಶ್ ನ್ಯೂಸ್

Latest Posts

Featured Videos