ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ದೂರು

ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ದೂರು

ಬೆಂಗಳೂರು, ಮಾ. 29, ನ್ಯೂಸ್ ಎಕ್ಸ್ ಪ್ರೆಸ್: ತೇಜಸ್ವಿ ಸೂರ್ಯ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ತೇಜಸ್ವಿ ಸೂರ್ಯ ವಿರುದ್ಧ ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ದೂರು ನೀಡಿದೆ.

ಮೋದಿಯನ್ನು ವಿರೋಧಿಸುವವರು ದೇಶವನ್ನು ವಿರೋಧಿಸುವಂತೆ ಎಂದು ಹೇಳಿಕೆ ನೀಡಿರುವ ತೇಜಸ್ವಿ ಸೂರ್ಯ ವಿರುದ್ಧ ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ದಾಖಲಿಸಿದೆ.

ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯಾಗಿ ಚುನಾವಣಾ ಸಂದರ್ಭದಲ್ಲಿ ಇಂತಹ ಹೇಳಿಕೆ ನೀಡುವ ಮೂಲಕ ಮತದಾರರನ್ನು ಬೆದರಿಸುವ ಯತ್ನ ನಡೆಸಿದ್ದಾರೆ. ಈ ಅಭ್ಯರ್ಥಿಯನ್ನು ಸ್ಪರ್ಧೆಯಿಂದ ಅನರ್ಹಗೊಳಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos