ಸಿಡಿಲು ಬಡಿದು ದೇವಾಲಯದ ಗೋಪುರ ಛಿದ್ರ..!

ಸಿಡಿಲು ಬಡಿದು ದೇವಾಲಯದ ಗೋಪುರ ಛಿದ್ರ..!

ಚಿಕ್ಕಬಳ್ಳಾಪುರ, ಜೂನ್.1, ನ್ಯೂಸ್ ಎಕ್ಸ್ ಪ್ರೆಸ್: ದೇವಾಲಯಕ್ಕೆ ಸಿಡಿಲು ಬಡಿದ ಪರಿಣಾಮ ದೇವಾಲಯದ ಗೋಪುರ ಛಿದ್ರ-ಛಿದ್ರವಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕು ಹೊಸಹುಡ್ಯ ಗ್ರಾಮದಲ್ಲಿ ನಡೆದಿದೆ.

ತಾಲೂಕು ಹೊಸಹುಡ್ಯ ಗ್ರಾಮದ  ದೇವರಾದ ಶ್ರೀ ಲಕ್ಷ್ಮೀಜನಾರ್ಧನಸ್ವಾಮಿ ದೇಗುಲಕ್ಕೆ ಸಿಡಿಲು ಬಡಿದ ಪರಿಣಾಮ ದೇವಾಲಯದ ಗೋಪುರದ ಕಳಸ ಕಿತ್ತು ಬಂದಿದೆ. ಗ್ರಾಮಸ್ಥರು ದೇವಾಲಯದ ಬಳಿ ಬಂದು ನೋಡಿದಾಗ ನಡೆದ ಘಟನೆ ಬೆಳಕಿಗೆ ಬಂದಿದೆ. ದೇವಾಲಯದ ಬಹುತೇಕ ಭಾಗ ಹಾನಿಗೆ ಒಳಗಾಗಿದೆ. ಗ್ರಾಮಸ್ಥರನ್ನು ರಕ್ಷಿಸುವ ಸಲುವಾಗಿ ದೇವರೇ ತನ್ನ ಮೇಲೆ ಸಿಡಿಲನ್ನು ಬರ ಮಾಡಿಕೊಂಡಿದ್ದಾನೆ ಎಂದು ಗ್ರಾಮಸ್ಥರು ದೇವರ ಶಕ್ತಿ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos