ಟೌನ್ ಹಾಲ್ ಬಳಿ ಉದ್ವಿಗ್ನ ಪರಿಸ್ಥಿತಿ!

ಟೌನ್ ಹಾಲ್ ಬಳಿ ಉದ್ವಿಗ್ನ ಪರಿಸ್ಥಿತಿ!

ಬೆಂಗಳೂರು, ಡಿ. 19: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ನಡೆಯುತ್ತಿದ್ದ ಪ್ರತಿಭಟನೆ ಸಿಲಿಕಾನ್ ಸಿಟಿಗೂ ವ್ಯಾಪಿಸಿದೆ. ಟೌನ್ ಹಾಲ್ ಬಳಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಪೊಲೀಸ್ ವಾಹನ, ಬಸ್ ಅಲ್ಲದೆ, ಸಿಕ್ಕ ಸಿಕ್ಕ ಖಾಸಗಿ ವಾಹನಗಳನ್ನೂ ಬಳಸಿ ಪ್ರತಿಭಟನಾಕಾರರನ್ನು ಸಾಗಿಸುತ್ತಿದ್ದು, ಖಾಸಗಿ ಬಸ್, ಆಟೋ, ಟಿಟಿ ವಾಹನಗಳು ಸೇರಿದಂತೆ ಇತೆ ವಾಹನಗಳಲ್ಲಿ ಸಾಗಿಸುತ್ತಿದ್ದಾರೆ.

ಪ್ರತಿಭಟನಾಕಾರರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಈ ವೇಳೆ ಪ್ರತಿಭಟನಾಕಾರಾಗಿ ಆಗಮಿಸಿದ್ದ ರಾಜೀವ್ ಗೌಡ ಮಾತನಾಡಿ, ಈ ಕುರಿತು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದೇವೆ. ಕಮೀಷನರ್ ವಿರುದ್ಧ ಪ್ರಕರಣ ದಾಖಲಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ಸ್ಥಳಗಳಾದ ಟೌನ್ ಹಾಲ್, ಮೈಸೂರು ಬ್ಯಾಂಕ್ ವೃತ್ತದ ಬಳಿ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos