ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎಷ್ಟೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿದರು ಸಹ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಬೈಕ್ ಹಾಗೂ ಟ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಾರ್ಮೆಂಟ್ಸ್ ಉದ್ಯೋಗಿಗಳು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ ಬಂಗಾರಪೇಟೆ ತಾಲೂಕಿನಲ್ಲಿ ನಡೆದಿದೆ.
ಬೇಗನೂರು ಬಳಿ ಈ ಘಟನೆ ನಡೆದಿದ್ದೇ ದೇಶಿಹಳ್ಳಿ ಗ್ರಾಮದ ನಿವಾಸಿ ಮುತ್ತು ಹಾಗೂ ಮಂಡ್ಯದ ನಾಗಮಂಗಲ ಮೂಲದ ರವಿ ಮೃತರು ಮೃತ ಇಬ್ಬರು ಬೇಗನೂರು ನಲಿ ಗಾರ್ಮೆಂಟ್ಸ್ ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದರು. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಟ್ಯಾಕ್ಟರ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.